ಮಂಗಳೂರು, ಅ.2: ನಗರದ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಇವರು ಪುತ್ತೂ ತಾಲೂಕಿನ ಈಶ್ವರಮಂಗಲದವರಾಗಿದ್ದು ಪ್ರಸ್ತುತ ಮಂಗಳೂರಿನ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು. ಈ ಹಿಂದೆ ಮಂಗಳೂರು ದಕ್ಷಿಣ (ಪಾಂಡೇಶ್ವರ), ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿದ್ದರು.
ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

