Connect with us

ಅಪರಾಧ

ಎಡಿಟೆಡ್ ವಿಡಿಯೋ ಮೂಲಕ ಜನ್ಮದಿನದಂದೇ ಗಾಂಧೀಜಿಗೆ ಅವಮಾನ – ಮಂಗಳೂರಿನ ಯುವಕನ ವಿರುದ್ದ ದೂರು | ಗಾಂಧಿಯ ಅವಮಾನ ದೇಶದ ಅವಮಾನ – ತಪಿತಸ್ಥನ ವಿರುದ್ದ ಕಠಿನ ಕ್ರಮ ಕೈಗೊಳ್ಳದಿದ್ದರೇ ಉಗ್ರ ಹೋರಾಟ ಡಿವೈಎಫ್ಐ

Ad Widget

Ad Widget

Ad Widget

Ad Widget

ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ  ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ  ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ ಠಾಣೆಗೆ ಡಿವೈಎಫ್‌ಐ ದೂರು ನೀಡಿದೆ.

Ad Widget

Ad Widget

Ad Widget

ಹರೇಕಳ ಗ್ರಾಮದ ಪ್ರಜ್ವಲ್ ಎಂಬಾತ ವಾಟ್ಸಾಪ್ ನಲ್ಲಿ, ಗಾಂಧೀಜಿ ವೇಷಧಾರಿಯೊಬ್ಬಪಾಶ್ಚಿಮಾತ್ಯ ರಾಷ್ಟ್ರದ  ಯುವತಿಯೊಬ್ಬಳ ತೆ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿರುವ ಎಡಿಟೆಡ್ ವೀಡಿಯೋವನ್ನ ಹರಿಯಬಿಟ್ಟು ವಿಕೃತಿ  ಮೆರೆದಿರುವುದಾಗಿ ಡಿವೈಎಫ್‌ಐ  ಘಟನೆ ದೂರಿನಲ್ಲಿ ಆರೋಪಿಸಿದೆ.

Ad Widget

ಬ್ರಿಟೀಷರ ಆಳ್ವಿಕೆಯ ವಿರುದ್ಧ ನಿಸ್ವಾರ್ಥವಾಗಿ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತಮಹಾತ್ಮ ಗಾಂಧೀಜಿಯನ್ನು ಅವರ ಜನ್ಮ ದಿನದಂದೇ ಅವಮಾನಿಸಿರುವ ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗಾಂಧೀಜಿಯನ್ನು ಅವಮಾನಿಸಿದನೆಂದರೆ ದೇಶವನ್ನೇ ಅವಮಾನಿಸಿದಂತೆ.ಹಾಗಾಗಿ ತಪ್ಪಿತಸ್ಥನವಿರುದ್ದ ಕಠಿಣಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ  ರಾಟ ನಡೆಸುವುದಾಗಿ  ಡಿವೈಎಫ್‌ಐ ಎಚ್ಚರಿಸಿದೆ.

Ad Widget

Ad Widget

ಅವಮಾನಿಸಿದ ಟ್ರೋಲ್ ಪೇಜ್ ಗಳು

Ad Widget

Ad Widget

Ad Widget

ಇದರ ಜತೆಗೆ  ಕರಾವಳಿ ಮೂಲದ ಎನ್ನಲಾದ ಎರಡು ಇನ್ಸ್ಟಾಗ್ರಾಮ್ ಟ್ರೋಲ್ ಪೇಜ್ ಗಳು ಸಾಮಾಜಿಕ ತಾಣದಲ್ಲಿ ರಾಷ್ಟ್ರಪಿತ ಗಾಂಧಿ ಭಾವಚಿತ್ರವನ್ನು ದೃಶ್ಯವೊಂದಕ್ಕೆ ಜೋಡಿಸಿ ಅಶ್ಲೀಲ ಹಾಗೂ ಅಸಭ್ಯವಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇನ್ಸ್ಟಾಗ್ರಾಮ್ ಪೇಜ್ ಗಳಾದ ಟ್ರೋ ಮದರೆಂಗಿ ಮತ್ತು ಕುಡ್ಲಾ ಟ್ರೋಲ್ ಪೇಜ್ ಗಳಲ್ಲಿ ಅಶ್ಲೀಲ ನೃತ್ಯವೊಂದಕ್ಕೆ ಗಾಂದೀಜಿಯವರ ಮುಖ ಜೋಡಿಸಿ ಪೋಸ್ಟ್ ಮಾಡಲಾಗಿದೆ.ಈ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು , ಈ ಟ್ರೋಲ್ ಪೇಜ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

Click to comment

Leave a Reply

ಅಪರಾಧ

Bomb threat-ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನೆ

Ad Widget

Ad Widget

Ad Widget

Ad Widget

ಕೆಲ ತಿಂಗಳುಗಳ ಹಿಂದೆಯಷ್ಟೆ ಬೆಂಗಳೂರಿನ ಶಾಲೆಗಳಿಗೆ ಇಮೇಲ್ ರೂಪದಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಲೋಕಸಭಾ ಚುನಾವಣೆಯ ಮಧ್ಯದಲ್ಲಿ ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

Ad Widget

Ad Widget

Ad Widget

ಈ ಬಾಂಬ್ ಬೆದರಿಕೆ ಮೇಲ್ ಏ 29 ರಂದು ಬಂದಿದೆ ಎಂದು ಮೂಲಗಳಿದೆ ತಿಳಿದು ಬಂದಿದೆ . ಆದರೇ ವಾರದ ಬಳಿಕ ಈ ಮಾಹಿತಿ ಬಹಿರಂಗವಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

“ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ. ಎಲ್ಲಾ ಮೂರು ವಿಮಾನಗಳಲ್ಲಿ ಬಾಂಬ್ಗಳನ್ನು ಅಳವಡಿಸಲಾಗಿದೆ.” ಕೆಲವೇ ಗಂಟೆಗಳಲ್ಲಿ ದೊಡ್ಡ ರಕ್ತಪಾತವಾಗುತ್ತದೆ. “ಭಯೋತ್ಪಾದಕರ ತುರ್ತು ಸಂಖ್ಯೆ 111 ಈ ಕೃತ್ಯದ ಹಿಂದೆ ಇದೆ” ಎಂದು ಮೇಲ್ ನಲ್ಲಿ ಬರೆಯಲಾಗಿತ್ತು

Ad Widget

Ad Widget
Continue Reading

ಅಪರಾಧ

Daughter-in-law-ಅತ್ತೆಯನ್ನು ಕೊಂದು ಸಹಜ ಸಾವು ಎಂಬಂತೆ ಬಿಂಬಿಸಿದ ಸೊಸೆ – 15 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

Ad Widget

Ad Widget

Ad Widget

Ad Widget

ಮಡಿಕೇರಿ: ಸೊಸೆಯೊಬ್ಬಳು ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಆಕೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಅವರನ್ನು ಕೊಲೆಗೈದ ಸೊಸೆ ಬಿಂದು (26) ಬಂಧಿತ ಆರೋಪಿ.

Ad Widget

Ad Widget

Ad Widget

ಘಟನೆ ಹಿನ್ನೆಲೆ:
ಮರಗೋಡಿನಲ್ಲಿ ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಹಾಗೂ ಅತ್ತೆ ಪೂವಮ್ಮ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ. ಏ.15 ರಂದು ಪತಿ ಮೌಲ್ಯಮಾಪನ ಕರ್ತವ್ಯಕ್ಕಾಗಿ ಮಡಿಕೇರಿಗೆ ತೆರಳಿದ್ದ ಸಂದರ್ಭ ಪೂವಮ್ಮ ಕುಸಿದು ಬಿದ್ದಿರುವುದಾಗಿ ಪತಿ ಪ್ರಸನ್ನ ಅವರಿಗೆ ಬೆಳಗ್ಗೆ ಬಿಂದು ಕರೆ ಮಾಡಿ ತಿಳಿಸಿದ್ದಾಳೆ. ಅವರು ಬಂದು ನೋಡುವಷ್ಟರಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ನಂತರ ಮೃತ ಪೂವಮ್ಮ ಅವರನ್ನು ಅಗ್ನಿಸ್ಪರ್ಶದ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಪೂವಮ್ಮ ಹೃದ್ರೋಗ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಆ ಕ್ಷಣದಲ್ಲಿ ಸಾವಿನ ಕುರಿತು ಹೆಚ್ಚಿನ ಅನುಮಾನವೂ ಕುಟುಂಬಸ್ಥರಲ್ಲಿ ಮೂಡಿರಲಿಲ್ಲ. ಅಂತ್ಯಸಂಸ್ಕಾರದ ಬಳಿಕ ಗ್ರಾಮದಲ್ಲಿ ಸಾವಿನ ಕುರಿತು ಊಹಾಪೋಹಗಳು ಕೇಳಿ ಬರುತ್ತಿದ್ದವು.

Ad Widget

ದಿನಕಳೆದಂತೆ ಪೂವಮ್ಮ ಸಾವಿನ ಬಗ್ಗೆ ಕುಟುಂಬಸ್ಥರಿಗೆ ತೀವ್ರ ಅನುಮಾನ ಮೂಡಿದೆ. ಅದರಲ್ಲೂ ಪತಿ ಪ್ರಸನ್ನ ಅವರಿಗೆ ಘಟನೆ ನಡೆದ ಸ್ಥಳ, ದಿಂಬಿನ ಕವರ್, ಬಟ್ಟೆಯ ಮೇಲೆ ರಕ್ತದ ಕಲೆ, ಮುಖದಲ್ಲಿ ಕೆಲವೊಂದು ಪರಚಿದ ಕಲೆಗಳು ಗಮನಿಸಿ ಸಂಶಯ ಮತ್ತಷ್ಟು ಹೆಚ್ಚಾಗಿದೆ. ಇದರೊಂದಿಗೆ ಬಿಂದು ನಡವಳಿಕೆಯಲ್ಲಿನ ಬದಲಾವಣೆಯೂ ಹೆಚ್ಚಿನ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಆದರೆ, ಘಟನೆ ನಡೆದ ದಿನದಂದು ಪೊಲೀಸರಿಗೆ ಈ ಬಗ್ಗೆ ಯಾರೂ ಮಾಹಿತಿ ನೀಡಿರುವುದಿಲ್ಲ.

Ad Widget

Ad Widget

ತಲೆಯ ಹಿಂಭಾಗಕ್ಕೆ ಮೊಬೈಲ್‌ನಿಂದ ಹಲ್ಲೆ:
ಅತ್ತೆಗೆ ಬೆಳಗ್ಗಿನ ಉಪಾಹಾರ ಮಾಡಲು ಬರುವಂತೆ ಬಿಂದು ಕರೆದಿದ್ದಾಳೆ. ಈ ಸಂದರ್ಭ ತಿಂಡಿ ಮಾಡಲು ನಿರಾಕರಿಸಿದ ಹಿನ್ನೆಲೆ ವಾಗ್ವಾದ ಉಂಟಾಗಿದೆ. ಈ ಸಂದರ್ಭ ಕೋಪಗೊಂಡ ಬಿಂದು ಕೈಯಲ್ಲಿದ್ದ ಮೊಬೈಲ್‌ನಿಂದ ತಲೆಯ ಹಿಂಭಾಗಕ್ಕೆ ಹಲ್ಲೆಗೈದಿದ್ದಾಳೆ. ಹಾಸಿಗೆ ಮೇಲೆ ಕುಸಿದು ಬಿದ್ದ ಪೂವಮ್ಮ ಅವರನ್ನು ನೋಡದೆ ಹಾಗೆಯೇ ತೆರಳಿದ್ದಾಳೆ. ತೀವ್ರ ರಕ್ತಸ್ರಾವವಾದ ಪರಿಣಾಮ ಪೂವಮ್ಮ ಕೊನೆಯುಸಿರೆಳೆದಿದ್ದಾರೆ. ನಂತರ ಸಾವಿನ ವಿಚಾರ ತಿಳಿದ ಬಿಂದು ಮನೆಯಲ್ಲಿ ಹರಿದಿದ್ದ ರಕ್ತವನ್ನು ಶುಚಿಮಾಡಿದ್ದಲ್ಲದೆ, ಹಾಸಿಗೆ ಮೇಲಿದ್ದ ಬೆಡ್‌ಶೀಟ್ ಸೇರಿದಂತೆ ಕೆಲ ಬಟ್ಟೆಯನ್ನು ಒಗೆಯಲು ಶೇಖರಿಸಿಡುವ ಬಾಸ್ಕೆಟ್‌ಗೆ ಹಾಕಿ ನೆಲಕ್ಕೆ ಹಾಸಿದ್ದ ಮ್ಯಾಟ್‌ನ್ನು ಬದಲಾಯಿಸಿ ಆಕೆ ಧರಿಸಿದ್ದ ಬಟ್ಟೆಯನ್ನೂ ಬದಲಾಯಿಸಿಕೊಂಡು ಪ್ರಕರಣವನ್ನು ಮರೆಮಾಚುವ ಯತ್ನಕ್ಕೆ ಮುಂದಾಗಿದ್ದಳು ಎಂದು ಪತಿ ಪ್ರಸನ್ನ ದೂರಿನಲ್ಲಿ ಉಲ್ಲೇಖಿಸಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

Ad Widget

Ad Widget

ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ ಸಂದರ್ಭ ತಪ್ಪೊಪ್ಪಿಕೊಂಡಿರುವ ಬಿಂದು ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೀಗ ಆರೋಪಿತೆ ಮಡಿಕೇರಿ ಬಂಧಿಖಾನೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಳೆ.

Continue Reading

ಅಪರಾಧ

Suspension order-ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ದೊರೆತು ಕರ್ತವ್ಯಕ್ಕೆ ತೊಡಗಿದ ಬೆನ್ನಲ್ಲೇ ಅಮಾನತು ಆದೇಶ

Ad Widget

Ad Widget

Ad Widget

Ad Widget

ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

Ad Widget

Ad Widget

Ad Widget

‘ರಾಮಚಂದ್ರ ಅವರು ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ’ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜ. 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

Ad Widget

ಈ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಈ ನಡುವೆ ರಾಮಚಂದ್ರ ಅವರ ವಿರುದ್ಧದ ದೂರಿನ ಕುರಿತು ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ದೃಷ್ಟಿಯಿಂದ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ರಾಮಚಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಲು ಪುತ್ತೂರು ಎಪಿಎಂಸಿ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.

Ad Widget

Ad Widget

ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಅಮಾನತು ಆದೇಶ ಬಂದಿದೆ.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading