ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣ ಸ್ವಾಮಿ ಅ.3 ರಂದು ರಾತ್ರಿ ಪುತ್ತೂರಿಗೆ ಆಗಮಿಸಿದರು. ಬಂಟ್ವಾಳದಲ್ಲಿ ಇಂದು (ಅ. 4) ನಡೆಯಲಿರುವ ʼಅಂತ್ಯೋದಯʼ ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸುವ ನಿಟ್ಟಿನಲ್ಲಿ ಆಗಮಿಸಿರುವ ಚಿತ್ರದುರ್ಗದ ಸಂಸದರೂ ಆಗಿರುವ ಸಚಿವರು ನಿನ್ನೆ ರಾತ್ರಿ ಪುತ್ತೂರಿನ ಐಬಿಯಲ್ಲಿ ತಂಗಿದ್ದರು.
ಇಂದು ಬೆಳಿಗ್ಗೆ ಸಚಿವರು ಜಿಲ್ಲೆಯ ಹಿರಿಯ ರಾಜಕಾರಣಿ, ಬಿಜೆಪಿಯನ್ನು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಪುತ್ತೂರಿನ ಮಾಜಿ ಮಾಜಿ ಶಾಸಕ ಉರಿಮಜಲು ರಾಮ ಭಟ್ ಅವರ ಕೊಂಬೆಟ್ಟುವಿನ ಮನೆಗೆ ಭೇಟಿ ನೀಡಿದರು. ರಾಮ ಭಟ್ ಅವರ ಯೋಗಕ್ಷೇಮ ವಿಚಾರಿಸಿದ ಸಚಿವರು ಕೆಲ ಹೊತ್ತು ಅಲ್ಲಿ ಕಳೆದರು. ಈ ಸಂದರ್ಭ ಅವರಿಗೆ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು ಸಾಥ್ ನೀಡಿದರು.
ಈ ಸಂದರ್ಭ ನಗರಸಭಾ ಅಧ್ಯಕ್ಷ ಕೆ ಜೀವಂಧರ್ ಜೈನ್, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್, ನಿತೀಶ್ ಶಾಂತಿವನ, ತಾ.ಪಂ ಮಾಜಿ ಸದಸ್ಯ ಹರೀಶ್ ಬಿಜತ್ರೆ, ನವೀನ್ ಪಡಿವಾಳ್, ಧರ್ಣಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಅವರು ಪುತ್ತೂರಿನ ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಭೇಟಿ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ ಪ್ರಾರ್ಥಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ,ಭಾಮಿ ಜಗದೀಶ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.