Ad Widget

ವಾರಂಟ್ ಜಾರಿಯಾದ ಬಳಿಕ ಅ. 5 ರಂದು ಸುಳ್ಯ ನ್ಯಾಯಾಲಯಕ್ಕೆ ಸಾಕ್ಷ್ಯ ನುಡಿಯಲು ಹಾಜರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

dk Shivakumar
Ad Widget

Ad Widget

Ad Widget

ಸುಳ್ಯ : ಅ. 4: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡಿಯಲು ಸುಳ್ಯ ನ್ಯಾಯಾಲಯದಿಂದ ಹಲವು ಬಾರಿ ವಾರಂಟ್ ಜಾರಿಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂನೆಗೂ ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

ವಿದ್ಯುತ್ ಸಮಸ್ಯೆ ಕುರಿತು 2016ರಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಡುವೆ ಬಿಸಿ ಬಿಸಿ ಪೋನ್ ಸಂಭಾಷಣೆ ನಡೆದಿತ್ತು. ಈ ಕುರಿತು ಡಿಕೆಶಿ ಸೂಚನೆಯಂತೆ ಮೆಸ್ಕಾಂ ಅಧಿಕಾರಿಯೊಬ್ಬರು ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದರು .ಈ ದೂರಿನ ಆಧಾರದಲ್ಲಿ ಸಾಯಿ ಗಿರಿಧರ್ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

Ad Widget

Ad Widget

Ad Widget

Ad Widget

Ad Widget

ಈ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಹಾಜರಾಗುವಂತೆ ಡಿಕೆಶಿಗೆ ಮೂರು ಬಾರಿ ಸಮನ್ಸ್ ನೀಡಲಾಗಿತ್ತು. ಸೆ.29ರಂದು ಹಾಜರಾಗುವಂತೆ ವಾರಂಟ್ ನೀಡಿದ್ದರೂ ಗೈರುಹಾಜರಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್ ಅವರಿಗೆ ನ.6 ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ಮತ್ತೊಮ್ಮೆ ವಾರೆಂಟ್ ಜಾರಿ ಮಾಡಿತ್ತು. ಅಲ್ಲದೆ ಡಿಕೆಶಿ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ಡಿ.ಕೆ. ಶಿವಕುಮಾರ್ ಅವರು ಅ.5ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅ.5ರಂದು ಬೆಳಗ್ಗೆ 7.25ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಏರ್ಪೋರ್ಟ್ಗೆ ಬಂದಿಳಿಯಲಿದ್ದು, 11 ಗಂಟೆಗೆ ರಸ್ತೆ ಮೂಲಕ ಸುಳ್ಯಕ್ಕೆ ತೆರಳಿ, 11.30ಕ್ಕೆ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.

Ad Widget

Ad Widget

Ad Widget

Ad Widget

ಮಧ್ಯಾಹ್ನ 12.30ಕ್ಕೆ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 3 ಗಂಟೆಗೆ ಕುಕ್ಕೆಯಿಂದ ನಿರ್ಗಮಿಸಿ, 5.30ಕ್ಕೆ ಮಂಗಳೂರು ತಲುಪಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಡಿಕೆಶಿಯ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: