ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ ವತಿಯಿಂದ ರೂ. 1.84 ಕೋಟಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ನಿರ್ಮಾಣಗೊಂಡಿರುವ ಆಕ್ಸಿಜನ್ ಉತ್ಪಾದನಾ ಘಟಕವು ಅ.6 ರಂದು ಉಧ್ಘಾಟನೆಗೊಳ್ಳಲಿದೆ. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಘಟಕವನ್ನು ಉದ್ಘಾಟಿಸಲಿದ್ದಾರೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಮಂಗಳವಾರ ಅವರು ಪುತ್ತೂರು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ನೂತನ ಘಟಕವು ನಿಮಿಷಕ್ಕೆ 450 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಸಾಮಾರ್ಥ್ಯ ಹೊಂದಿದೆ. 63 ಜಂಬೋ ಸಿಲಿಂಡರ್‌ಗಳನ್ನು ಭರ್ತಿ ಮಾಡುವಷ್ಟು ಅಮ್ಲಜನಕವನ್ನು ಅದು ದಿನವೊಂದರಲ್ಲಿ ಉತ್ಫಾದಿಸಲಿದೆ. ದಿನವೊಂದರ ಗರಿಷ್ಟ 100 ರೋಗಿಗಳಿಗೆ ಬೇಕಾದಷ್ಟು ಆಮ್ಲಜನಕವನ್ನು ಪೂರೈಸುವ ಸಾಮಾರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಶಾಸಕರು ವಿವರಿಸಿದರು.
ಕೊರೊನಾ ಸಂಕಷ್ಟ ಕಾಲದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಕ್ಸಿಜನ್ ಬೇಡಿಕೆ ಕಂಡು ಬಂದ ಹಿನ್ನಲೆಯಲ್ಲಿ ಪುತ್ತೂರು ಉಪ ವಿಭಾಗ ವ್ಯಾಪ್ತಿಯಲ್ಲೂ ಅಮ್ಲಜನಕ ಘಟಕ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು. ಭವಿಷ್ಯದಲ್ಲಿ ಪುತ್ತೂರು ತಾಲೂಕಿನಲ್ಲಿ ರೋಗಿಗಳಿಗೆ ಅತ್ಯವಶ್ಯವಾಗಿರುವ ಅಮ್ಲಜನಕದ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಈ ನಿಟ್ಟಿನಲ್ಲಿ ಕಾರ್ಯೋನ್ಮೂಖರಾದಗ ಪುತ್ತೂರಿನ ಪ್ರತಿಷ್ಟಿತ ಬಹುರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೋ ಇದನ್ನು ಪುತ್ತೂರು ತಾಲೂಕು ಆಸ್ಫತ್ರೆಯಲ್ಲಿ ಸ್ಥಾಪಿಸಲು ಸಂಪೂರ್ಣ ಸಹಕಾರ ನೀಡಿತ್ತು ಎಂದ ಶಾಸಕರು ಪುತ್ತೂರಿಗೆ ಅತೀ ಅಗತ್ಯವಾಗಿದ್ದ ಈ ವ್ಯವಸ್ಥೆಯನ್ನು ಒದಗಿಸಿಕೊಟ್ಟ ಕ್ಯಾಂಪ್ಕೋದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.

ಮೂರು ಅಕ್ಸಿಜನ್ ಘಟಕ ಲೋಕಾರ್ಪಣೆಯ ದಾಖಲೆ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಸರಕಾರಿ ಆಸ್ಪತ್ರೆ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅ. 6ರಂದು ಏಕಕಾಲದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು ಉದ್ಘಾಟನೆಗೊಳ್ಳಲಿದೆ. ಇದು ಪುತ್ತೂರು ವಿಧಾನಸಭಾ ಕ್ಷೇತ್ರದ ದಾಖಲೆಯಾಗಿದೆ. ಈ ಮೂರು ಆಕ್ಸಿಜನ್ ಉತ್ಪಾದನಾ ಘಟಕಗಳು ದಾನಿಗಳ ನೆರವಿನಿಂದ ನಿರ್ಮಾಣಗೊಂಡಿದೆ ಎಂದು ಶಾಸಕರು ವಿವರಿಸಿದರು.
ಸಚಿವ ಡಾ. ಕೆ. ಸುಧಾಕರ್ ಪ್ರಥಮ ಭೇಟಿ
ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅ. 6 ರಂದು ಇದೇ ಮೊದಲ ಬಾರಿಗೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಯೂ ಅ.6 ರಂದು ನಡೆಯಲಿದ್ದೂ ಮಧ್ಯಾಹ್ನ 12 ಗಂಟೆಗೆ ನೆರವೇರಿದಲಿದೆ.
ನೆರವೇರಿಸಿ ಬಳಿಕ ಮಧ್ಯಾಹ್ನ ೨ಗಂಟೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ವೆಬಿನಾರ್ ಮೂಲಕ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸಚಿವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಪುತ್ತೂರು ನಗರಸಭಾಧ್ಯಕ್ಷ ಕೆ. ಜೀವಂಧರ್ ಜೈನ್, ಪುತ್ತೂರು ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಹಾಗೂಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಬಿಜೆಪಿಯ ಹಿರಿಯ ಮುಂದಾಳು ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಮುಖರಾದ ಜಯಶ್ರೀ ಶೆಟ್ಟಿ, ಯುವರಾಜ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.