ಪುತ್ತೂರು,ಅ.06: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಪ್ರಯೋಜಕತ್ವದಲ್ಲಿ ನಿರ್ಮಾಣಗೊಂಡ ನೂತನ ಆಕ್ಸಿಜನ್ ಉತ್ಪಾದನಾ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟನೆಗೊಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ನಿರ್ದೇಶಕ ಕೃಷ್ಣಕುಮಾರ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್‌ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ತಾ.ಪಂ ಕಾಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಿದ್ಯಾ ಗೌರಿ, ರಪಿಕ್, ಡಾ.ಪ್ರಸನ್ನ, ರಾಜೇಶ್ ಬನ್ನೂರು, ಕೃಷ್ಣ ನಾಯ್ಕ್, ಸಹಾಯಕ ಆಡಳಿತಾಧಿಕಾರಿ ಯೋಗಾನಂದ, ಡಾ.ಜಯದೀಪ್, ಡಾ.ಜಯಕುಮಾರಿ, ಮಂಗನ ಗೌಡ, ಅತಿಥಿಗಳನ್ನು ಗೌರವಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಸ್ವಾಗತಿಸಿದರು.