ಪುತ್ತೂರು : ಎ.ಸಿ.ಬಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿ ರಾಷ್ಟ್ರಪತಿ ಪದಕಕ್ಕೆಭಾಜನರಾದ ಸತೀಶ್ ಬಿ.ಎಸ್ ರವರು ಪುತ್ತೂರಿನ ನೂತನ ವೃತ್ತ ನಿರೀಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಈವರೆಗೆ ಪುತ್ತೂರು ನಗರ ಠಾಣೆ ವೃತ್ತ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ್ ನಾಯ್ಕ್ ರವರನ್ನು ಮತ್ತೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ
ಕರ್ನಾಟಕ ರಾಜ್ಯದ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ರವರು ರಾಜ್ಯದ ಒಟ್ಟು 73 ಪೊಲೀಸ್ ಇನ್ಸ್‌ಪೆಕ್ಟರ್ ( ಸಿವಿಲ್) ರುಗಳನ್ನು ವರ್ಗಾವಣೆಗೊಳಿಸಿ ಅ.7ರಂದು ಸುತ್ತೋಲೆ ಹೊರಡಿಸಿದ್ದಾರೆ. ಈ ಕೂಡಲೇ ಅದೇಶದನ್ವಯ ಪದಗ್ರಹಣ ಮಾಡಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಳಗಲಿಯ ಬಡ ಕುಟುಂಬವೊಂದರಲ್ಲಿ ಜನಿಸಿದ ಸತೀಶ್ ಬಿ. ಎಸ್. ಅವರು ಮೂಡಿಗೆರೆ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಯಲ್ಲಿ ವೃತ್ತಿ ಆರಂಭಿಸಿದರು. ಬಳಿಕ ಪರೀಕ್ಷೆ ಎದುರಿಸಿ ಅದರಲ್ಲಿ ತೇರ್ಗಡೆ ಹೊಂದಿ ಠಾಣಾಧಿಕಾರಿಯಾಗಿ ಭಡ್ತಿ ಪಡೆದು, ಸದ್ಯ ಸರ್ಕಲ್ ಇನ್ಸ್ ಪೆಕ್ಟರ್ ಹುದ್ದೆಗೆ ಏರಿದ್ದಾರೆ.

ಉಡುಪಿ ಎಸಿಬಿಯಾಗಿ ಇವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿದ ಸರಕಾರವೂ 2020ರ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಪ್ರದಕ ನೀಡಿ ಪುರಸ್ಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದರು.
