Ad Widget

ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಗೋವಾಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣ | ತಪಿತಸ್ಥನಿಗೆ 12 ವರ್ಷ ಕಠಿಣ ಶಿಕ್ಷೆ – ಸಂತೃಸ್ತೆಗೆ 3 ಲಕ್ಷ ಪರಿಹಾರ

Court-Order-1
Ad Widget

Ad Widget

Ad Widget

ಮಂಗಳೂರು:ಅ 14: ಅಪ್ರಾಪ್ತೆಯನ್ನು ಅಪಹರಿಸಿ ಗೋವಾಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಗರ್ಭಿಣಿಯಾಗುವಂತೆ ಮಾಡಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವೂ 12 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ಅ 13 ರಂದು ತೀರ್ಪು ನೀಡಿದೆ. ಅಲ್ಲದೇ ಹದಿನಾರರ ಹರೆಯದ ಸಂತ್ರಸ್ತ ಬಾಲಕಿಗೆ ಅಪರಾಧಿಯೂ 50 ಸಾವಿರ ರೂಪಾಯಿ ಪರಿಹಾರ ಹಾಗೂ ಸರಕಾರ ಅದಕ್ಕೆ 2.50 ಲ.ರೂ ಹಣವನ್ನು ಸೇರಿಸಿ ಒಟ್ಟು 3 ಲ.ರೂ ಪರಿಹಾರ ನೀಡಬೇಕು ಎಂದು ತನ್ನ ಅದೇಶದಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-1 (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಈ ತೀರ್ಪು ಪ್ರಕಟಿಸಿದರು ಮೂಲತಃ ಗದಗ ಜಿಲ್ಲೆಯವನಾಗಿದ್ದು, ಕಾವೂರು ಬಳಿ ವಾಸವಾಗಿದ್ದ ಕೂಲಿ ಕಾರ್ಮಿಕ ಮಲ್ಲಿಕ್ ಯಾನೆ ಮಲ್ಲಿಕಾರ್ಜುನ ಹನುಮಂತಪ್ಪ (27) ಶಿಕ್ಷೆಗೊಳಗಾದ ಅಪರಾಧಿ.

Ad Widget

Ad Widget

Ad Widget

Ad Widget

ಅಪರಾಧಿ ಮತ್ತು ಸಂತ್ರಸ್ತೆ ಬಾಲಕಿಯ ಮನೆ ಅಕ್ಕಪಕ್ಕದಲ್ಲಿತ್ತು. ಆತ ಮತ್ತು ಸಂತ್ರಸ್ತೆಯ ತಂದೆ ಸ್ನೇಹಿತರಾಗಿದ್ದು, ಜತೆಯಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮಲ್ಲಿಕಾರ್ಜುನ ತನ್ನ ಸ್ನೇಹಿತನ ಪುತ್ರಿಯಾದ 16 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಪುಸಲಾಯಿಸಿ 2017ರ ಮೇ ತಿಂಗಳಿನಲ್ಲಿ ಅಪಹರಿಸಿದ್ದ. ಬಾಲಕಿ ನಾಪತ್ತೆಯಾದ ಬಗ್ಗೆ ಹೆತ್ತವರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿ ಗೋವಾದಲ್ಲಿ ಬಾಲಕಿಯ ಜತೆಗಿದ್ದು, ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭ ಧರಿಸಿದ್ದಳು. ಬಾಲಕಿ ಗೋವಾದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆರೋಪಿಯು ಬಾಲಕಿ ಮತ್ತು ಮಗುವನ್ನು ಬಿಟ್ಟು ಪರಾರಿಯಾಗಿದ್ದ. ಹೆತ್ತವರಿಗೆ ಈ ವಿಚಾರ ತಿಳಿಸದಂತೆ ಬೆದರಿಕೆಯನ್ನೂ ಹಾಕಿದ್ದ. ವಿಚಾರ ತಿಳಿದ ಬಾಲಕಿಯ ಹೆತ್ತವರು ಬಾಲಕಿಯನ್ನು ಆಕೆಯ ಮನೆಗೆ ಕರೆದುಕೊಂಡು ಬಂದು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಅಪಹರಣ, ಅತ್ಯಾಚಾರ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

Ad Widget

Ad Widget

ತನಿಖೆ

ಎಸಿಪಿಗಳಾದ ರಾಜೇಂದ್ರ, ಮಂಜುನಾಥ ಶೆಟ್ಟಿ ಮತ್ತು ಶ್ರೀನಿವಾಸ ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ 25 ಸಾಕ್ಷಿಗಳನ್ನು ವಿಚಾರಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು

ಶಿಕ್ಷೆಯ ಪ್ರಮಾಣ

ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿಣ ಸಜೆ ಹಾಗೂ 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಜೆ, ಅಪಹರಣ ನಡೆಸಿರುವುದಕ್ಕೆ ಆರು ವರ್ಷ ಕಠಿಣ ಸಜೆ ಹಾಗೂ 25 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 2 ತಿಂಗಳು ಹೆಚ್ಚುವರಿ ಸಜೆ, ಮದುವೆ ಆಗುವುದಾಗಿ ಹೇಳಿ ವಂಚಿಸಿರುವುದಕ್ಕೆ ಆರು ತಿಂಗಳು ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಜೆ, ಪೋಕ್ಸೊ ಕಾಯಿದೆಯ ಕಲಂನಡಿ 12 ವರ್ಷಗಳ ಕಠಿನ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: