ಮಂಗಳೂರು: ಅ 13 : ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಬೆನ್ ಇರಿದು ಪರಾರಿಯಾದ ಘಟನೆ ಬುಧವಾರ( ಅ 13) ದಂದು ತಡರಾತ್ರಿ ಮಂಗಳೂರಿನ ಮಾಲೆಮಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತಕ್ಕೆ ಒಳಗಾದವರು. ಅವರ ಬೆನ್ನಿನ ಭಾಗಕ್ಕೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಮನೆಗೆ ತೆರಳುತ್ತಿದ್ದ ವೇಳೆ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಅವರ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ. ಬೆನ್ನಿಗೆ ಚೂರಿಯಿಂದ ಇರಿದ ತಂಡವೂ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ.

ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.