ರಾಜಕೀಯ
ಸಂಘದ ಕೆಲಸ ನಮ್ಮ ಜವಾಬ್ದಾರಿ ಎಂಬ ಭಾವನೆ ಸಮಾಜದ ಜನರಲ್ಲಿ ಮೂಡಬೇಕು: ದಾ.ಮ.ರವೀಂದ್ರ |ಪುತ್ತೂರಿನಲ್ಲಿ ಅರ್.ಎಸ್.ಎಸ್ ನ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ

ಪುತ್ತೂರು : ಅ 15 : ಹಿಂದೂಗಳಲ್ಲೇ ಸಂಘಟನೆ ಆಗಬೇಕು, ಸಂಘಶಕ್ತಿ ಮತ್ತು ಸಜ್ಜನ ಶಕ್ತಿಗಾಗಿ ವೃದ್ಧಿಸಬೇಕು ಎಂಬ ಕಾರಣಕ್ಕಾಗಿ ಸಂಘ ಗತಿವಿಧಿಗಳ ಮೂಲಕ ಸಮಾಜವನ್ನು ತಲುಪುತ್ತಿದೆ. ದೇಶದ ಪ್ರತಿ ಮನೆಯೂ ಸಂಘದ ಮನೆಯಾಗಬೇಕು, ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ ಸಂಘದ ಧ್ಯೇಯಕ್ಕೆ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಬೇಕು. ಸಂಘ ಮಾಡುವ ಕೆಲಸ ನಮ್ಮ ಜವಾಬ್ದಾರಿ ಎಂದು ಅರಿತು ಸಮಾಜ ಮುಂದೆ ಬರೆಬೇಕು. ಸಂತರ ನೇತೃತ್ವದಲ್ಲಿ, ಸ್ವಯಂಸೇವಕರ ಬೆಂಬಲದಲ್ಲಿ ಸಮಾಜವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸ್ವೇವಕ ಸಂಘದ ಜ್ಯೇಷ್ಠ ಪ್ರಚಾರಕ ದಾ.ಮ.ರವೀಂದ್ರ ಹೇಳಿದರು.
ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ ಮತ್ತು ವಿಜಯದಶಮಿ ಉತ್ಸವದಲ್ಲಿ ಪಾಲ್ಗೊಂಡು ಶುಕ್ರವಾರ ಮಾತನಾಡಿದರು.
ಸಮಾಜದ ಅಭಿವೃದ್ಧಿಗಾಗಿ ಸಮಯ ಕೊಡುವವರು, ಜೀವನವನ್ನು ಮುಡಿಪಾಗಿಡುವವರು ಅದರ ಉನ್ನತಿಯನ್ನು ಕಾಣದೆ ಮರೆಯಾಗಿದ್ದಾರೆ. ಮುಂದಿನ ಪೀಳಿಗೆ ಹಿಂದಿನವರ ಸಮರ್ಪಣೆಯ ಫಲವನ್ನು ಪಡೆಯುತ್ತಾರೆ. ಸಂಘದ ಸ್ವಯಂಸೇವಕರೂ ತಮ್ಮ ಸಮರ್ಪಣೆಯ ಗುಣದ ಕಾರಣಕ್ಕಾಗಿ ಸಮಾಜದಲ್ಲಿ ಧನಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ. ಸಮಾಜವನ್ನು ವಿಸ್ತಾರವಾಗಿ ನೋಡಿದಾಗ ಸಂಘ ಕಾರ್ಯದ ಅನಿವಾರ್ಯತೆ ಅರಿವಾಗುತ್ತದೆ ಎಂದು ನುಡಿದರು.
ಸಂಘ ಸ್ಥಾಪನೆಯಾಗಿ ನೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸಂಘ ಪ್ರಾರಂಭವಾಗಿದ್ಯಾಕೆ? ಸಂಘ ಎಷ್ಟು ಜನರನ್ನು ತಲುಪಿದೆ? ಎಂಬಿತ್ಯಾದಿ ಪ್ರಶ್ನೆ ಇಂದು ಹಲವರಲ್ಲಿದೆ. ಯಾವುದೇ ಅನುಕೂಲಗಳಿಲ್ಲದೆ, ವಿದೇಶಿಗರ ಆಳ್ವಿಕೆಯ ಸಂದರ್ಭದಲ್ಲಿ, ವಿರೋಧವಿದ್ದಾಗ ಸಂಘಕಾರ್ಯವನ್ನು ಸಂಘದ ಸಂಸ್ಥಾಪಕ ಪ.ಪೂ.ಡಾಕ್ಟರ್ ಕೇಶವ ಬಲಿರಾಮ ಹೆಡಗೇವಾರರು ಪ್ರಾರಂಭ ಮಾಡಿದರು. ನಾನಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿ ಉನ್ನತ ಸ್ಥಾನದಲ್ಲಿದ್ದರೂ ಅವರು ಸಾಮಾನ್ಯ ವ್ಯಕ್ತಿ ದೇಶಭಕ್ತನಾಗಿ ಬದಲಾದಾಗ ದೇಶ ಬದಲಾಗುತ್ತದೆ ಎಂಬ ಗುರಿಯನ್ನಿಟ್ಟುಕೊಂಡು ಸಂಘಟನೆಯ ಕಾರ್ಯ ಪ್ರಾರಂಭ ಮಾಡಿದರು ಎಂದು ಅವರು ಅಭಿಪ್ರಾಯಪಟ್ಟರು.

ಸ್ವಯಂಸೇವಕತ್ವದ ಬಗ್ಗೆ ಡಾಕ್ಟರ್ ಜಿ ಹೆಚ್ಚು ಗಮನವಹಿಸಿದ್ದರು. ದೇಶ, ಸಮಾಜ, ಧರ್ಮ, ಸಂಸ್ಕøತಿಯ ಕೆಲಸವನ್ನು ಯಾರು ಆದ್ಯತೆ ನೀಡಿ ಮಾಡುತ್ತಾರೋ ಅವರು ಸ್ವಯಂಸೇವಕರು. ಸಂಘಸ್ಥಾನದಿಂದಾಗಿ ಅರಳುವ ಭಾವ, ಅದು ಕಲಿಸಿದ ಸದ್ಗುಣ ಸಂಸ್ಕಾರದಿಂದ ವ್ಯಕ್ತಿ ನಿರ್ಮಾಣವಾಗುತ್ತದೆ. ಹೀಗೆ ನಿರ್ಮಾಣಗೊಂಡ ಸ್ವಯಂಸೇವಕರು ಸಮಾಜದಲ್ಲಿ ಮೇಲ್ಪಂಕ್ತಿ ಹಾಕಿಕೊಟ್ಟು ಸಮಾಜಕ್ಕೆ ಸಮರ್ಪಿತ ವ್ಯಕ್ತಿಯಾಗಿ ಕಾಣಿಸಿಕೊಂಡ ಹಲವಾರು ನಿದರ್ಶನಗಳಿವೆ. ದೇಶದ ಸಾಮಾನ್ಯ ದಿನಗಳಲ್ಲಿ ಮಾತ್ರವಲ್ಲದೆ, ಇಕ್ಕಟ್ಟು-ಬಿಕ್ಕಟ್ಟಿನ ಸಂದರ್ಭದಲ್ಲೂ ಸ್ವಯಂಸೇವಕರ ಸ್ವಯಂಸೇವಕತ್ವ ಪ್ರಕಟವಾಗಿದೆ ಎಂದು ನುಡಿದರು.

ಸಂಘಸ್ಥಾನದಲ್ಲಿ ದೊರೆತ ಸಂಸ್ಕಾರವನ್ನು ನಮ್ಮ ಜೀವನದಲ್ಲಿ ನಾವು ಎಷ್ಟು ಅಳವಡಿಸಿಕೊಂಡಿದ್ದೇವೆ ಎನ್ನುವುದರ ಕುರಿತು ಗಮನವಹಿಸಿದಾಗಲೇ ಸಂಘದ ಸಾಮಥ್ರ್ಯ ಅರಿವಾಗುತ್ತದೆ. ಹೆಸರು, ಕೀರ್ತಿ, ಪ್ರಸಿದ್ಧಿ, ಸ್ಥಾನಮಾನ, ಅಧಿಕಾರ, ಹಣವನ್ನು ಬಯಸದೆ ಸ್ವಯಂಸೇವಕ ಕಾರ್ಯನಿರತನಾಗಬೇಕು. ಸಮಾಜಕ್ಕಾಗಿ ಸಮಯ ಸಮರ್ಪಣೆಯಲ್ಲಿ ನನ್ನ ಪಾತ್ರ ಎಷ್ಟು ಎಂದು ಪ್ರತಿಯೊಬ್ಬರೂ ಪ್ರಶ್ನಿಸಿಕೊಳ್ಳಬೇಕು. ಸಂಘದ ಸ್ವಯಂಸೇವಕನನ್ನು ಅರ್ಥ ಮಾಡಿಕೊಂಡರೆ ಸಂಘವನ್ನು ಅರ್ಥ ಮಾಡಿಕೊಂಡಂತೆ. ಆದ್ದರಿಂದ ಕೇವಲ ಹೊರ ರೂಪದ ಸ್ವಯಂಸೇವಕರಾಗದೆ ಅಂತಃರಂಗದ ಸ್ವಯಂಸೇವಕರಾಗಬೇಕು ಎಂದರು.

ಮಂಗಳೂರು ವಿಭಾಗದಲ್ಲಿ ಸಂಘ ಕಾರ್ಯ ಪ್ರಾರಂಭವಾಗಿ ಸುಮಾರು 80 ವರ್ಷಗಳಾಗಿವೆ. ತುರ್ತು ಪರಿಸ್ಥತಿಯ ಸಂದರ್ಭದಲ್ಲಿ ಸರಸಂಘಚಾಲಕರ ಗಮನವನ್ನು ಸೆಳೆಯುವಲ್ಲಿ ಮಂಗಳೂರು ವಿಭಾಗ ತಮ್ಮ ಉತ್ಸಾಹದ ಮೂಲಕ ಯಶಸ್ವಿಯಾಗಿತ್ತು. ಅಯೋಧ್ಯೆಯ ಕರಸೇವೆಗಾಗಿ ತಮ್ಮ ಸರ್ವಸ್ವವನ್ನೂ ಮುಡಿಪಾಗಿಟ್ಟ ಅನೇಕರು, ವಿಶೇಷವಾಗಿ ಇಲ್ಲಿನ ಮಹಿಳೆಯರು ಕೆಚ್ಚೆದೆಯ ಭಾವ ತೋರ್ಪಡಿಸಿದ್ದರು. ಇಲ್ಲಿನ ಸಂಘದ ಇತಿಹಾಸದಲ್ಲಿ ಪುತ್ತೂರು ಜಿಲ್ಲೆಯ ಸ್ವಯಂಸೇವಕರ ಪಾತ್ರ ಮುಖ್ಯವಾಗಿದೆ ಎಂದು ನುಡಿದರು.

ಮಂಗಳೂರು ವಿಭಾಗದಲ್ಲಿ ಸಂಘ ಶುರುವಾದಾಗಿನಿಂದ ಪುತ್ತೂರು ಜಿಲ್ಲೆಯ ಸ್ವಯಂಸೇವಕರು ಗುರುತರವಾದ ಕಾರ್ಯಗಳ ಮೂಲಕ ಮುಂಚೂಣಿಯಲ್ಲಿದ್ದಾರೆ. ಈಗ ಮತ್ತೆ ಪುತ್ತೂರಿನ ಸ್ವಯಂಸೇವಕರು ಜಿಲ್ಲೆಯ ಎಲ್ಲಾ ಮನೆಗಳನ್ನು ತಲುಪುವ ಮೂಲಕ ಉಪವಸತಿಗಳ ಸಾಮಥ್ರ್ಯವನ್ನು ಹೆಚ್ಚಿಸಬೇಕು. ಸಮಾಜಕ್ಕೆ ಸಮಯ ಕೊಡುವವರ ಬಲ ಜಾಸ್ತಿಯಾಗಬೇಕು. ಇಲ್ಲಿನ ಸಂಘ ಕಾರ್ಯಕ್ಕೆ ಬಲ ತುಂಬುವುದಕ್ಕಾಗಿಯೇ ಇಂದು ವಿಜಯದಶಮಿಯಂದು ‘ಪಂಚವಟಿ’ ಜಿಲ್ಲಾ ಕಾರ್ಯಾಲಯದ ಜೀರ್ಣೋದ್ದಾರಕ್ಕೆ ಭೂಮಿಪೂಜನಾ ಕಾರ್ಯಕ್ರಮ ನಡೆದಿದೆ. ಸ್ವಯಂಸೇವಕರಿಂದಲೇ ಇದು ಸಂಪೂರ್ಣಗೊಳ್ಳಲಿದೆ ಎಂಬ ಭರವಸೆ ಇದೆ. ಮುಂದೆಯೂ ಪುತ್ತೂರು ಜಿಲ್ಲೆಯ ಸ್ವಯಂಸೇವಕರು ತಮ್ಮ ಸಮಯ ಸಮರ್ಪಣೆಯಿಂದ ದೇಶಕ್ಕೆ ಆದರ್ಶಪ್ರಾಯರಾಗಿ ಸ್ಪಂದಿಸಿ ಮೇಲ್ಪಂಕ್ತಿ ಆಗುತ್ತಾರೆ ಎಂಬ ಆಶಯವಿದೆ ಎಂದು ಹೇಳಿದರು.

ನೂತನ ಕಾರ್ಯಾಲಯದ ಭೂಮಿಪೂಜನ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಟೋಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ರಾಷ್ಟ್ರಕ್ಕೆ ಅಧರ್ಮಿಗಳ ದಾಳಿಗಳಾದಾಗ ಅದನ್ನು ಎದುರಿಸಲು ದೇವಿ ಅನೇಕ ಅವತಾರಗಳನ್ನು ತಳೆದಳು ಎಂಬ ನಂಬಿಕೆ ನಮ್ಮಲ್ಲಿದೆ. ದುರ್ಗಾಸಪ್ತಶತಿಯನ್ನು ಅಧ್ಯಯನ ಮಾಡಿದಾಗ ಎಲ್ಲರ ಶಕ್ತಿ ಒಟ್ಟುಗೂಡಿ ದೇವಿ ನಿರ್ಮಾಣವಾಗಿದ್ದು ಎಂದು ತಿಳಿಯುತ್ತದೆ. ಸಂಘಟನೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದನ್ನು ಇದು ತಿಳಿಸುತ್ತದೆ. ಇದನ್ನು ಮನಗಂಡ ಪ.ಪೂ. ಡಾ.ಕೇಶವ ಬಲಿರಾಮ ಹೆಡಗೇವಾರರು ಈ ರಾಷ್ಟ್ರದ ಸತ್ ಶಕ್ತಿಗಳೊಂದಾಗಿ, ಇಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಾಣುವಂತಾಗಬೇಕು ಎಂದು ಕನಸುಕಂಡರು ಎಂದರು.

ಅಂದು ಡಾಕ್ಟರ್‍ಜಿ ಕಂಡ ಕನಸು, ಅನೇಕರಿಗೆ ಕನಸು ಮಾತ್ರ ಎಂದೆನಿಸಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸಂಘಟಿತ ಶಕ್ತಿಗಳೊಂದಾದಾಗ ಅದ್ಭುತಗಳನ್ನು ಸಾಧಿಸಬಹುದು ಎನ್ನುವುದು ಎಲ್ಲರ ಅನುಭವಕ್ಕೆ ಬರುತ್ತಿದೆ. ಇಂತಹ ಸಂಘಟಿತ ಕೆಲಸಕ್ಕೆ ಶಕ್ತಿ ಕೊಡುವಲ್ಲಿ ಪುತ್ತೂರು ಅದರದ್ದೇ ಆದ ಕೊಡುಗೆಯನ್ನು ಕೊಟ್ಟಿದೆ. ಈ ಕಾರ್ಯಕ್ಕೆ ವೇಗ ದೊರಕಲು ಸುಂದರ ಕಾರ್ಯಾಲಯದ ಭೂಮಿಪೂಜೆ ಇಂದು ನಡೆದಿದೆ. ಎಲ್ಲಾ ಬಂಧುಗಳ ಒಮ್ಮನಸಿನ ಪ್ರಯತ್ನದ ಫಲವಾಗಿ ಹಿಂದಿಗಿಂತ ಹೆಚ್ಚು ಸಶಕ್ತವಾಗಿ ರಾಷ್ಟ್ರಸೇವೆ ಮಾಡುವಂತಾಗಬೇಕು ಎಂಬ ಅಪೇಕ್ಷೆ ಇದೆ. ಪ್ರತಿ ಮನೆಯ ಸ್ವಯಂಸೇವಕನಿಗೂ ಈ ಕಾರ್ಯಲಯ ಪ್ರೇರಣೆಯನ್ನು ಒದಗಿಸುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜ್ಯೇಷ್ಠ ಪ್ರಚಾರಕ ಸೀತಾರಾಮ ಕೆದಿಲಾಯ, ಪ್ರಾಂತ ಸಂಘಚಾಲಕ ಡಾ.ವಾಮನ್ ಶೆಣೈ, ಪ್ರಾಂತ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್, ಹೊಸದಿಗಂತ ಪತ್ರಿಕೆಯ ನಿರ್ವಾಹಕ ನಿರ್ದೇಶಕ ಪ್ರಕಾಶ್ ಪಿ.ಎಸ್, ದಕ್ಷಿಣ ಪ್ರಾಂತದ ಸಹ ಪ್ರಾಂತ ಪ್ರಚಾರಕ ನಂದೀಶ್, ಪ್ರಾಂತ ಸಹ ಸೇವಾಪ್ರಮುಖ್ ನಾ.ಸೀತಾರಾಮ, ಪ್ರಾಂತ ಗೋಸೇವಾ ಪ್ರಮುಖ್ ಪ್ರವೀಣ್ ಸರಳಾಯ, ಸಚಿವ ಎಸ್.ಅಂಗಾರ, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಮತ್ತು ಸಂಘದ ಅನೇಕ ಹಿರಿಯ ಕಾರ್ಯಕರ್ತರು ಭಾಗಿಯಾಗಿದ್ದರು. ವಿಜಯದಶಮಿಯ ಪ್ರಯುಕ್ತ ಆಕರ್ಷಕ ಪಥಸಂಚಲನ ಜರುಗಿತು.

ಭೂಮಿ ಪೂಜೆಗೆ ಪುತ್ತೂರಿನ ಪವಿತ್ರ ನದಿಗಳ ಜಲ ಮತ್ತು ಹಲವು ದೇವಸ್ಥಾನಗಳ ತೀರ್ಥ ಸಮರ್ಪಣೆ
ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳ ಜಲ, ಸುವರ್ಣ ನದಿಯ ಜಲ, ಬೆಟ್ಟಂಪಾಡಿಯ ಕ್ಷೀರ ಹೊಳೆಯ ಜಲ, ಬಲ್ನಾಡು, ಮಿತ್ತಡ್ಕ, ಉಳ್ಳಾಲ್ತಿ ಹೊಳೆಯ ಜಲ, ಮೈತ್ರೇಯಿ ಗುರುಕುಲದ ತಟದಲ್ಲಿರುವ ಪಂಚಗಾಮಿನಿ ನದಿಯ ಜಲ, ಅಳದಂಗಡಿಯ ಫಲ್ಗುಣಿ ನದಿಯ ತೀರ್ಥ, ಕಪಿಲ ತೀರ್ಥ, ವಿಟ್ಲ ಪಂಚಲಿಂಗೇಶ್ವರ ಕ್ಷೇತ್ರದ ತೀರ್ಥ, ನಾರಾವಿಯ ಸೂರ್ಯನಾರಾಯಣ ದೇವಸ್ಥಾನದ ತೀರ್ಥ, ವಿಟ್ಲದ ನರಹರಿ ಸದಾಶಿವ ದೇವಸ್ಥಾನದ ಶಂಖ, ಚಕ್ರ, ಗದಾ, ಪದ್ಮಾ ಕೆರೆಗಳ ತೀರ್ಥ, ವಿಟ್ಲದ ಕೊಡಂಗಾಯಿ ಅಲ್ಲಿನ ತೀರ್ಥವನ್ನು ಭೂಮಿ ಪೂಜೆಯ ಸಮಯದಲ್ಲಿ ಸಮರ್ಪಿಸಲಾಯಿತು. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿ.ಎಸ್.ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.


ಉದ್ಯೋಗ
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:ನಾನು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಸಿಬ್ಬಂದಿಗಳ ನೇಮಕಾತಿ ನಡೆದಿತ್ತು.ಅಲ್ಲಿಂದ ಇಲ್ಲಿಯವರೆಗೆ ನೇಮಕಾತಿ ನಡೆದಿಲ್ಲ. ಕಳೆದ 7ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ಈಗ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ 9,000 ಸಿಬ್ಬಂದಿಗಳ ನೇಮಕ ಮತ್ತು 5500 ಹೊಸಬಸ್ ಖರೀದಿ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿಯಾದ ಮೇಲೆ ಮೇಲೆ ಜನರು ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ ಎಂದರು.
ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣವನ್ನು 2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹಲವು ಬಸ್ಸು ಕೊಟ್ಟಿದ್ದೇನೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ
Baryl Vanneihsangi: ಸೋಷಿಯಲ್ ಮೀಡಿಯಾ ಸ್ಟಾರ್ ಈಗ ಮಿಜೋರಾಂ ರಾಜ್ಯದ ಕಿರಿಯ ಮಹಿಳಾ ಶಾಸಕಿ – ಬೆರಿಲ್ ವನ್ನೈಹಸಂಗಿ ಬಗ್ಗೆ ನಿಮಗೆಷ್ಟು ಗೊತ್ತು?

ಡಿಸೆಂಬರ್ 4 ರಂದು ಮಿಜೋರಾಂ ವಿಧಾನಸಭಾ ಚುನಾವಣಾ ಫಲಿತಾಂಶ ಬಿಡುಗಡೆಯಾಗಿದ್ದು ಝೋರಂ ಪೀಪಲ್ಸ್ ಮೂವ್ಮೆಂಟ್ (ZPM) MNFನ ಸೋಲಿಗೆ ಕಾರಣವಾಯಿತು. ZPM ನ ಹೊಸ ಚುನಾಯಿತ ಮಹಿಳಾ ಶಾಸಕಿ ಬೆರಿಲ್ ವನ್ನೈಹಸಂಗಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಐಜ್ವಾಲ್ ಸೌತ್-III ಸ್ಥಾನದಿಂದ ಚುನಾವಣೆಯಲ್ಲಿ ಗೆಲ್ಲುವ ಮೂಲಕ, ಬೆರಿಲ್ ವನ್ನೆಹಸಂಗಿ ಮಿಜೋರಾಂನ ಅತ್ಯಂತ ಕಿರಿಯ ಮಹಿಳಾ ಶಾಸಕರಾಗಿದ್ದಾರೆ.
ವನ್ನೈಹಸಂಗಿ ಅವರು ಎಂಎನ್‌ಎಫ್‌ನ ಎಫ್ ಲಾಲ್ನುನ್ಮಾವಿಯಾ ಅವರನ್ನು 1,414 ಮತಗಳಿಂದ ಸೋಲಿಸಿದರು. ಬೆರಿಲ್ ವನ್ನೆಹಸಂಗಿ 9,370 ಮತಗಳನ್ನು ಪಡೆದರೆ, ಎಫ್ ಲಾಲ್ನುನ್ಮಾವಿಯಾ 7,956 ಮತಗಳನ್ನು ಪಡೆದರು.

ಮಿಜೋರಾಂ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕಿ ಬೆರಿಲ್ ವನ್ನೈಹಸಂಗಿಗೆ 32ರ ಹರೆಯ. ಆಕೆಯ ಚುನಾವಣಾ ಅಫಿಡವಿಟ್ ಪ್ರಕಾರ, ಅವರು ಈ ಹಿಂದೆ ಐಜ್ವಾಲ್ ಮುನ್ಸಿಪಲ್ ಕಾರ್ಪೊರೇಷನ್ (AMC) ನಲ್ಲಿ ಕೌನ್ಸಿಲರ್ ಆಗಿ ಕೆಲಸ ಮಾಡಿದ್ದಾರೆ. ಅವರು ಮೇಘಾಲಯದ ಶಿಲ್ಲಾಂಗ್‌ನಲ್ಲಿರುವ ನಾರ್ತ್ ಈಸ್ಟರ್ನ್ ಹಿಲ್ ವಿಶ್ವವಿದ್ಯಾಲಯದಲ್ಲಿ ಎಂಎ ಮಾಡಿದ್ದಾರೆ. ವರದಿಗಳ ಪ್ರಕಾರ, ಬೆರಿಲ್ ವನ್ನೆಹಿಸಂಗಿ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆ ಇಲ್ಲ. ಅವರು ಪ್ರಸಿದ್ಧ ಟಿವಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಬೆರಿಲ್ ವನ್ನೆಹ್‌ಸಂಗಿ ಸಾಕಷ್ಟು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ತನ್ನ Instagram ಬಯೋದಲ್ಲಿ, ಅವರು ಟಿವಿ ನಿರೂಪಕಿ, ಹೊಸ್ಟೆಸ್, ಆಂಕರ್ ಮತ್ತು ರಾಜಕಾರಣಿ ಎಂದು ವಿವರಿಸಿದ್ದಾರೆ.

ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಮೂವರು ಮಹಿಳಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಐಜ್ವಾಲ್ ಸೌತ್-III ರಿಂದ ಬೆರಿಲ್ ವನ್ನೆಹಸಂಗಿ ಹೊರತುಪಡಿಸಿ, ಲುಂಗ್ಲೆಯಿ ಪೂರ್ವ ಸ್ಥಾನದಿಂದ ಝಡ್ಪಿಎಂ ಲಾಲ್ರಿನ್ಪುಯಿ ಮತ್ತು ಪಶ್ಚಿಮ ತುಯಿಪುಯಿ ಕ್ಷೇತ್ರದಿಂದ ಪ್ರೊವಾ ಚಕ್ಮಾ ಗೆದ್ದಿದ್ದಾರೆ.

ಬ್ಯಾರಿಲ್ ವನ್ನೈಸಂಗಿ ಮಾತು:ಹ್ “ನಾವು ಮಹಿಳೆ ಆಗಿದ್ದೇವೆ ಎಂಬ ಕಾರಣಕ್ಕೆ ನಮ್ಮನ್ನು ತಡೆಯಬೇಕು ಎನ್ನುವುದು ಅದರ ಅರ್ಥವಲ್ಲ. ಎಲ್ಲಾ ಮಹಿಳೆಯರಿಗೆ ನಾನು ಹೇಳುವ ಒಂದು ವಿಚಾರ ಎಂದರೆ ನಾನು ಎಲ್ಲಾ ಮಹಿಳೆಯನ್ನು ಪ್ರೋತ್ಸಾಹಿಸಲು ಬಯಸುತ್ತೇನೆ. ಸಮಾಜದ ಎಲ್ಲಾ ಮಹಿಳೆಯರಿಗೆ ಈ ಸಂದೇಶವನ್ನು ನೀಡಲು ನಾನು ಬಯಸುತ್ತೇನೆ. ಇದು ಜನರ ಗೆಲುವಾಗಿದೆ. ಬದಲಾವಣೆ ಬಯಸುವ ಜನರು, ಹೆಚ್ಚಿನ ಅಭಿವೃದ್ಧಿಯನ್ನು ತರಲು ಬಯಸುವ ಜನರಿಗೆ ಈ ಗೆಲುವು ಸಮರ್ಪಿತವಾಗಿದೆ. ಯಾವುದೇ ವೈಯಕ್ತಿಕ ಒಲವು, ಸ್ವಜನಪಕ್ಷಪಾತ, ಭ್ರಷ್ಟಾಚಾರವಿಲ್ಲದೇ, ಪ್ರಾಮಾಣಿಕವಾಗಿ ಮತ್ತು ಸರಿಯಾದ ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ” ಎಂದು ಕಿರಿಯ ಮಹಿಳಾ ಶಾಸಕಿ ಬ್ಯಾರಿಲ್ ವನ್ನೈಹಸಂಗಿ ತಿಳಿಸಿದರು.


ರಾಜಕೀಯ
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನಾದ ತನ್ವೀರ್ ಫೀರ್ ಎಂಬಾತನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಸಮಾವೇಶದ ವೇದಿಕೆಯಲ್ಲಿ ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತ ವ್ಯಕ್ತಿ ಐಸಿಸ್ ಸಂಘಟನೆ ಜೊತೆಗೆ ಸಂಪರ್ಕ ಇರುವವನು. ಆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇರಲಿಲ್ವಾ? ಎಂದು ಪ್ರಶ್ನಿಸಿದರು.
ಎಲ್ಲ ಮಾಹಿತಿ ಪಡೆದೇ ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ ನಾನು ಹೇಳಿಕೆ ನೀಡುತ್ತಿಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಳ್ಳಲಿ ಎಂದು ಸವಾಲು ಹಾಕಿದರು. ಪ್ರಧಾನಿ ಕಾರ್ಯಕ್ರಮ ಇದ್ದರೆ ,ಯಾರ್ಯಾರು ವೇದಿಕೆ ಮೇಲೆ ಇರಬೇಕು ಎಂದು ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಇರ್ತಾರೆ ಎಂದು ಮಾಹಿತಿ ಇರಲಿಲ್ವಾ..? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ಹೇಳ್ತೀನಿ ಎಂದರು.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತನ್ವಿರ್ ಫೀರ್ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ.

ಯತ್ನಾಳ್ ಅವರ ಆರೋಪ ಏನು?
ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಫೀರ್ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.

ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಅಪರಾಧ21 hours ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?