ಪುತ್ತೂರು, ಅ.18: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅ.18ರಂದು ಬೆಳಿಗ್ಗೆ ನಡೆದಿದೆ.
ನದಿಗೆ ಹಾರಿದ ಮುತ್ತಪ್ಪ ಶೆಟ್ಟಿಯವರನ್ನು ಗಮನಿಸಿದ ಸ್ಥಳೀಯ ಯುವಕರು ರಕ್ಷಿಸಲು ಪ್ರಯತ್ನ ಪಟ್ಟರೂ ಆ ವೇಳೆಗಗಾಗಲೇ ಮುತ್ತಪ್ಪರವರು ಮೃತಪಟ್ಟಿದ್ದರೆಂದು ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.