ಪುತ್ತೂರು, ಅ.18: ಪುತ್ತೂರು ಬಿಜೆಪಿಯ ಭೀಷ್ಮ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ತೀವ್ರ ಅಸ್ವಸ್ಥಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 92 ವರ್ಷ ವಯಸ್ಸಾಗಿದ್ದು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯವು ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದಿಂದ ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು ಪುತ್ತೂರಿನ ತಮ್ಮ ನಿವಾಸಕ್ಕೆ ಹಿಂತಿರುಗಿದ್ದರು. ಇದೀಗ ಮತ್ತೆ ಅಸ್ವಸ್ಥರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಮ್ ಭಟ್ ರ ರಾಜಕೀಯ ಶಿಷ್ಯ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಕೆಲ ದಿನಗಳ ಹಿಂದೆ ರಾಮ್ ಭಟ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮತ್ತೆ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿರುವ ರಾಮ್ ಭಟ್ ಅವರನ್ನು ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಅಭಯಚಂದ್ರ ಜೈನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.