ಕೇರಳ : ಅನಾನಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಕೊಂದ ಆರೋಪಿಗಳು ಒಂದೂವರೆ ವರ್ಷದ ನಂತರ ಬಂಧನ

20211019_173006
Ad Widget

Ad Widget

Ad Widget

ತಿರುವನಂತಪುರಂ,ಅ.19: ಅನಾನಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ.

Ad Widget

ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್​ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.

Ad Widget

Ad Widget

Ad Widget

ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಅ.16ರಂದು ಶರಣಾಗಿದ್ದಾನೆ.

Ad Widget

ಈತ 2020 ಜೂನ್​ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್​ಗೆ ಶರಣಾಗಿದ್ದಾನೆ.
ಇನ್ನು ರಿಯಾಜುದ್ದೀನ್​ ತಂದೆ ಅಬ್ದುಲ್​ ಕರೀಮ್​ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್​ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.

Ad Widget

Ad Widget

ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು​ ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನೀರಿನಲ್ಲೇ ನರಳಿ ಮೃತಪಟ್ಟಿತ್ತು. ದೇಶಾದ್ಯಂತ ಬಾರಿ ಆಕ್ರೋಶಕ್ಕೆ ಈ ಘಟನೆ ಕಾರಣವಾಗಿತ್ತು . ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: