ಉಳ್ಳಾಲ, ಅ.19: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ನಗರ ಹೊರವಲಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿಯಲಾಗಿದೆ.
ಉಳ್ಳಾಲದಲ್ಲಿ ಗ್ಯಾಸ್ ರಿಪೇರಿ ಅಂಗಡಿ ಇಟ್ಟುಕೊಂಡಿರುವ ಹರೀಶ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ಚೂರಿ ಇರಿದು ಪರಾರಿಯಾಗಿದ್ದಾನೆ.
ಮೊಗವೀರಪಟ್ನ ನಿವಾಸಿ ವಿಶಾಲ್ ಎಂಬಾತ ಈ ಕೃತ್ಯ ನಡೆಸಿದ್ದಾನೆಂದು ತಿಳಿದುಬಂದಿದ್ದು ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ವಯ್ಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಶಂಕಿತ ಆರೋಪಿ ವಿಶಾಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.