ಎರಡು ತಂಡಗಳು ಬೆಳ್ಳಾರೆ ಮಸೀದಿಯಲ್ಲಿ ಹೊಡೆದಾಡಿಕೊಂಡ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಮೂವರು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ .
ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ ಎನ್ನಲಾಗಿದೆ
ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ ಗಲಾಟೆ ನಡೆದ ಬಗ್ಗೆ ದೂರು ದಾಖಲಾಗಿದೆ. ಇತ್ತಂಡದವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಇವರ ಪೈಕಿ ಒಂದು ತಂಡದ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದು ಇನ್ನೊಂದು ತಂಡದ ಹೈದರಾಲಿ ಮತ್ತು ಆಸಿರ್ ಪುತ್ತೂರಿನ ಪ್ರಗತಿ ಆಸ್ಪತ್ರೆ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದುಬಂದಿದೆ.
