ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್‌ ನಾಯಕ್‌ ವಿರುದ್ದ ಹೈಕೋರ್ಟ್ ರದ್ದುಗೊಳಿಸಿದ ಕೋಕಾ ಕಾಯಿದೆಯನ್ನು ಮರುನಿಗದಿಗೊಳಿಸಿದ ಸುಪ್ರೀಂಕೋರ್ಟ್ | ಜಾಮೀನಿಗೆ ತೊಡಕು ಸಾಧ್ಯತೆ

WhatsApp Image 2021-10-22 at 09.38.01
Ad Widget

Ad Widget

Ad Widget

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಾಯಿ ನಿವಾಸಿ  ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯಿದೆಯಡಿ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ – ಕೆಸಿಒಸಿಎ)  ರಾಜ್ಯ ಹೈಕೋರ್ಟ್‌ ಕೈಬಿಟ್ಟಿದ್ದ ಆರೋಪಗಳನ್ನು‌ ಅ. 21 ರಂದು ಸುಪ್ರೀಂಕೋರ್ಟ್‌ ಮರು ನಿಗದಿಗೊಳಿಸಿದೆ.  ಹತ್ಯೆಯಾದ ಗೌರಿ ಲಂಕೇಶ್ ರವರ ಸಹೋದರಿ  ಕವಿತಾ ಲಂಕೇಶ್‌ ಮತ್ತು ಕರ್ನಾಟಕ ಸರ್ಕಾರ ಮತ್ತಿತರರ ನಡುವಣ ಪ್ರಕರಣ ಇದಾಗಿದೆ

Ad Widget

ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ  ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಸಿ ಟಿ ರವಿಕುಮಾರ್ ಅವರಿದ್ದ ಪೀಠ ಆರೋಪಿಯ ವಿರುದ್ಧದ ಆರೋಪಗಳನ್ನು ಮರುನಿಗದಿಪಡಿಸಿತು. ಕೋಕಾ ಕಾಯ್ದೆಯ ಮರು ಜಾರಿಯಿಂದಾಗಿ ಆರೋಪಿ  ಮೋಹನ್ ನಾಯಕ್, ವಿಚಾರಣೆ ಮುಗಿಯುವವರೆಗೂ ಜಾಮೀನು ಪಡೆಯುವುದು ಕಷ್ಟವಾಗಲಿದೆ. ಕೋಕಾ ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಮೋಹನ್ ನಾಯಕ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಇತ್ಯರ್ಥ ಪಡಿಸುವವರೆಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಈ ಹಿಂದೆ ಹೇಳಿತ್ತು.

Ad Widget

Ad Widget

Ad Widget

ಬೆಂಗಳೂರು ಪೊಲೀಸ್ ಆಯುಕ್ತರು 2018ರಲ್ಲಿ ನೀಡಿದ್ದ ಆದೇಶವನ್ನು ಮತ್ತು ನಂತರದ ಪೂರಕ ಆರೋಪಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ 2021 ರ ಏಪ್ರಿಲ್ 22 ರಂದು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದೆ. ನಾಯಕ್‌ ವಿರುದ್ಧ ಕೋಕಾ ಕಾಯಿದೆಯ ಕೆಸಿಒಸಿಎ ಸೆಕ್ಷನ್ 3 (1) (i), 3 (2), 3 (3) ಮತ್ತು 3 (4) ಅಡಿಯಲ್ಲಿ ನಿಗದಿಪಡಿಸಲಾಗಿದ್ದ ಆರೋಪಗಳನ್ನು ಕೈಬಿಡಲಾಗಿತ್ತು. ಈಗ ಈ ಆರೋಪಗಳು ಮರುನಿಗದಿಯಾಗಿವೆ.

Ad Widget
ಮೋಹನ್‌ ನಾಯಕ್

ಕೃತ್ಯ ಎಸಗುವ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವಲ್ಲಿ ನಾಯಕ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಮೇಲ್ಮನವಿಯಲ್ಲಿ ತಿಳಿಸಲಾಗಿತ್ತು. ಕೋಕಾ ಕಾಯಿದೆ 2000ರ ಸೆಕ್ಷನ್ 24ನ್ನು ಪರಿಶೀಲಿಸದೆ ಹೈಕೋರ್ಟ್‌ ತಪ್ಪೆಸಗಿದೆ ಎಂದು ಕೂಡ ಅರ್ಜಿಯಲ್ಲಿ ತಿಳಿಸಲಾಗಿತ್ತು. ಕಾಯಿದೆ ಪ್ರಕಾರ ಎಡಿಜಿಪಿ ಶ್ರೇಣಿಗಿಂತ ಕೆಳಗಿರುವ ಯಾವುದೇ ಅಧಿಕಾರಿ ಪೂರ್ವಾನುಮತಿ ನೀಡಬಾರದು ಎನ್ನಲಾಗಿದ್ದು ಇದನ್ನು ಪ್ರಸ್ತುತ ಪ್ರಕರಣದಲ್ಲಿ ಉಲ್ಲಂಘಿಸಲಾಗಿದೆ ಎಂದು ಅರ್ಜಿ ತಿಳಿಸಿತ್ತು.

Ad Widget

Ad Widget

ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ವಿಚಾರಣಾ ಅನುಮತಿ ಹಂತಕ್ಕೂ ಮುನ್ನ ಸಂಶಯದ ಲಾಭವನ್ನು ಆರೋಪಿ ಮೋಹನ್‌ ನಾಯಕ್‌ಗೆ ನೀಡಬಹುದಾಗಿತ್ತು. ಆದರೆ, ಆರೋಪಿಯ ವಿರುದ್ಧದ ಆರೋಪಪಟ್ಟಿಯನ್ನು ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ವಿಚಾರಣೆ ವೇಳೆ ಈ ಹಿಂದೆ ನ್ಯಾಯಾಲಯ ಹೇಳಿತ್ತು.

ಗೌರಿ ಲಂಕೇಶ್

ಪ್ರಕರಣಕ್ಕೆ ಸಂಬಂಧಿಸಿದಂತೆ “ಸಾಕ್ಷ್ಯದ ಕೊರತೆ ಇದೆ ಎಂದು ನೀವು ವಾದಿಸಬಹುದು. ಆದರೆ, ಹೈಕೋರ್ಟ್‌ ಆರೋಪಪಟ್ಟಿಯನ್ನೇ ವಜಾ ಮಾಡಿದೆ. ಇದು ಸರಿಯಲ್ಲ ಮತ್ತು ನ್ಯಾಯಿಕ ವ್ಯಾಪ್ತಿ ಮೀರಿದ್ದಾಗಿದೆ. ಈ ರೀತಿ ಆರೋಪಪಟ್ಟಿಯನ್ನು ವಜಾ ಮಾಡಲಾಗದು. ಆರೋಪಪಟ್ಟಿಯ ವಿಶ್ಲೇಷಣೆಯನ್ನು ಹೈಕೋರ್ಟ್‌ ನಡೆಸಿಲ್ಲ. ಹೀಗಿರುವಾಗ ಹೈಕೋರ್ಟ್‌ ಆರೋಪಪಟ್ಟಿಯನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿಲ್ಲ ಎಂದೇ ಹೇಳಬೇಕಾಗುತ್ತದೆ” ಎಂದು ಅದು ನುಡಿದಿತ್ತು.

“ನಿಜವಾಗಿಯೂ ಅಪರಾಧ ಕೃತ್ಯ ಎಸಗಿದ್ದರಲ್ಲಿ ತಮ್ಮ ಕಕ್ಷಿದಾರನ ಪಾತ್ರವಿಲ್ಲ. ಕೋಕಾ ಅಡಿ ತಮ್ಮ ಕಕ್ಷಿದಾರರನ್ನು ವಶಕ್ಕೆ ಪಡೆಯಲು ಅಪರಾಧ ಕೂಟದಲ್ಲಿ ತಮ್ಮ ಕಕ್ಷಿದಾರರು ಭಾಗಿಯಾಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷಿಯಿಲ್ಲ” ಎಂದು ಆರೋಪಿ ಮೋಹನ್‌ ನಾಯಕ್‌ ಪರ ಹಿರಿಯ ವಕೀಲ ಬಸವ ಪ್ರಭು ಎಸ್ ಪಾಟೀಲ್ ಅವರು ವಾದಿಸಿದ್ದರು. ಇದಕ್ಕೆ ಪೀಠವು ಇದನ್ನು ವಿಚಾರಣೆ ಹಂತದಲ್ಲಿ ನೋಡಬಹುದಾಗಿದೆ ಎಂದು ಹೇಳಿತ್ತು.

ಹಿರಿಯ ಪತ್ರಕರ್ತೆ, ಸಾಮಾಜಿ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: