ಪುತ್ತೂರು: ಆ.21ರಂದು ಸಂಜೆ ಕಾಲೇಜ್ ವಿದ್ಯಾರ್ಥಿ ಹಾಗೂ ಇನ್ನೊರ್ವರಿಗೆ ಬೈಕ್ ಸವಾರರು ಹಲ್ಲೆ ನಡೆಸಿದ ಪ್ರಕರಣದಡಿ ಇಬ್ಬರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೂರು ನೆಕ್ಕಿಲ ನಿವಾಸಿ ಪ್ರತಾಪ್ ಮತ್ತು ಅಪ್ರಾಪ್ತನೊರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ
ತಾರಿಗುಡ್ಡ ಅಬ್ದುಲ್ ರಜಾಕ್ ರವರ ಪುತ್ರ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್ (16.ವ.)ಹಾಗೂ ಜಿಡೆಕಲ್ಲು ಇಬ್ರಾಹಿರವರ ಪುತ್ರ ಮಹಮ್ಮದ್ ಇಜಾಜ್ (232)ಹಲ್ಲೆಗೊಳಗಾದವರು. ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ
ದೂರಿನಲ್ಲಿ ಏನಿದೆ?
ಅ 21 ರಂದು ಸಂಜೆ 4 ಗಂಟೆ ಸುಮಾರಿಗೆ ಜಿಯಾದ್ ಕಾಲೇಜ್ ಬಿಟ್ಟು ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ FZ ಬೈಕ್ ( KA 19 – EG 7087) ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ನಾನು ಈ ಬಗ್ಗೆ ಬೈಕ್ ಸವಾರರಲ್ಲಿ ಪ್ರಶ್ನಿಸಿದ್ದು, ಆಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಜಿಯಾದ್ ಆರೋಪಿಸಿದ್ದಾರೆ. ಅಲ್ಲದೇ ಈ ವೇಳೆ ಆಕ್ಟಿವಾದಲ್ಲಿ ಬಂದ ಮಹಮ್ಮದ್ ಇಜಾಜ್‌ರವರು ನನ್ನ ರಕ್ಷಣೆಗೆ ಬಂದಿದ್ದು ಅವರ ಮೇಲೂ ಈ ಅಪರಿಚಿತ ಬೈಕ್ ಸವಾರರು ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
ಜಿಯಾದ್ ನೀಡಿದ ದೂರನ್ನು ದಾಖಲಿಸಿಕೊಂಡು ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಶೀಘ್ರ ಬಂಧನಕ್ಕೆ ಅಗ್ರಹ
ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಹಾಗೂ ಪಾಪ್ಯುಲರ್ ಫ್ರಂಟ್ ಅಪ್ ಇಂಡಿಯಾ ಆಗ್ರಹಿಸಿದೆ. ಆರೋಪಿಗಳ ಬಂಧನವಾಗದಿದ್ದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ತಿಳಿಸಿದ್ದಾರೆ