ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಅ 23ರ ನಡೆದಿದೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಮೃತ ಬಾಲಕಿ. ಈಕೆ ಪೈವಳಿಕೆ ನಗರ ಸರಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ.
ಅಕ್ಟೋಬರ್ 14 ರಂದು ಸಂಜೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ಆಕೆಯ ಬಟ್ಟೆಗೆ ಬೆಂಕಿ ತಗಲಿದ ಪರಿಣಾಮ ಗಂಭೀರ ಸುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾರಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿಯೂ ಚಿಕಿತ್ಸೆಗೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.