ಮಡಿಕೇರಿ: ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ, ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ 151 ರನ್ ಕಲೆ ಹಾಕಿತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಈ ಪಂದ್ಯ ಗೆದ್ದುಕೊಂಡಿದೆ.
ಪಾಕಿಸ್ತಾನ ವಿರುದ್ಧದ ಹೈವೊಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಆಟಗಾರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಅಣ್ಣಯ್ಯಗೌಡ ಅವರ ಪುತ್ರ ಡಿ.ಎ ಉದಯ(55) ಮೃತಪಟ್ಟವರು. ಭಾನುವಾರ ರಾತ್ರಿ ಟಿ.ವಿಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಉದಯ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.