Ad Widget

ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಪೋಕ್ಸೋ ಪ್ರಕರಣದಲ್ಲಿ ಬಂಧನ- ಹಾಸ್ಟೆಲ್’ನಲ್ಲಿದ್ದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ

a4372159_1621_P_3_mr-1
Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು:ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪುತ್ತೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ.

ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

Ad Widget

Ad Widget

Ad Widget

Ad Widget

ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ.

ವ್ಯಾಯಾಮ ಮಾಡಿಸುವ ವೇಳೆ ಆಕೆಯ ಸೊಂಟ ಮುಟ್ಟಿದರೆಂದು ಆರೋಪ ಕೇಳಿ ಬಂದಿದೆ.

ಬಂಧಿತ ಎಲ್ಯಾಸ್ ಪಿಂಟೋ ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನಲ್ಲಿ ನೃತ್ಯ ತರಬೇತಿಯೂ ನೀಡುತ್ತಿದ್ದಾರೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾಗಿಯೂ ನೂರಾರು ಕ್ರೀಡಾ ಪ್ರತಿಭೆಗಳನ್ನು ಬೆಳೆಸಿದ್ದಾರೆ, ಈ ಆರೋಪ ಆಪ್ತ ವರ್ಗಕ್ಕೆ ದಿಗ್ರಮೆ ಮೂಡಿಸಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: