ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಿಗೆ ಪುತ್ತೂರು ನ್ಯಾಯಾಲಯವೂ ಅ 27 ರಂದು ಜಾಮೀನು ಮಂಜೂರು ಮಾಡಿದೆ.
ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಜಾಮೀನು ಮಂಜೂರಾದ ಆರೋಪಿ. ಆರೋಪಿಯೂ ಕೆಲಸ ಮಾಡುವ ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹಾಗೂ ಅದೇ ಸಂಸ್ಥೆಯ ವಸತಿ ನಿಲಯದಲ್ಲಿ ವಾಸ್ತವ್ಯ ಹೊಂದಿದ್ದ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿ ದೂರುದಾರೆ.
ಆ 23 ರಂದು ಆರೋಪಿಯೂ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅ.25 ರಂದು ಸಂಜೆ ಅರೋಪಿಯನ್ನು ಪೊಲೀಸರು ಬಂಧಿಸಿದ್ದರು. ಅ.26 ರಂದು ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಆರೋಪಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವೂ ಆರೋಪಿಗೆ ಜಾಮೀನು ಮಂಜೂರು ಮಡಿದೆ. ಆರೋಪಿ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.