ಶ್ರೀಕ್ಷೇತ್ರ ಧರ್ಮಸ್ಥಳದ ಯಾತ್ರಾರ್ಥಿಗಳೇ ಗಮನಿಸಿ…! ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಸಮಯ ಬದಲು

dharma
Ad Widget

Ad Widget

Ad Widget

ಬೆಳ್ತಂಗಡಿ, ಅ. 27: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ.

Ad Widget

ದರ್ಶನ ಸಮಯ

Ad Widget

Ad Widget

Ad Widget

ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ 9ರ ವರೆಗೆ ಭಕ್ತರಿಗೆ ಊಟದ ವ್ಯವಸ್ಥೆ ಇರಲಿದೆ.

Ad Widget

ಬೀಡಿನಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳಗ್ಗೆ 9ರಿಂದ 12, ಸಂಜೆ 4ರಿಂದ 5 ಹಾಗೂ ರಾತ್ರಿ 7ರಿಂದ 9ರ ವರೆಗೆ ಭೇಟಿ ಮಾಡಬಹುದು.

Ad Widget

Ad Widget

ಮಂಜೂಷಾ ವಸ್ತು ಸಂಗ್ರಹಾಲಯವು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವೀಕ್ಷಣೆಗೆ ತೆರೆದಿರಲಿದೆ. ಕಾರು ಮ್ಯೂಸಿಯಂ ಬೆಳಗ್ಗೆ 8.30ರಿಂದ ಅಪರಾಹ್ನ 1 ಹಾಗೂ 2ರಿಂದ 7ರ ವರೆಗೆ ತೆರೆದಿರುತ್ತದೆ. ಹರಕೆ ಮಂಡೆ (ಮುಡಿ ತೆಗೆಯಲು) ಬೆಳಗ್ಗೆ 6ರಿಂದ ಅಪರಾಹ್ನ 2 ಮತ್ತು ಸಂಜೆ 5ರಿಂದ 7ರ ವರೆಗೆ ತೆರೆದಿರಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: