ಉಡುಪಿ ಅ 28 : ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯವೂ ಹತ್ತು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ.ಅ.16ರಂದು ಇಂದ್ರಾಳಿಯ ಫ್ಲ್ಯಾಟ್ ನಲ್ಲಿ ಕುಡಿದ ನಶೆಯಲ್ಲಿ ಆರ್ಯನ್ ಚಂದಾವನಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಯುವತಿ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿ್ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
