ಹೆಬ್ರಿ: ಆಗುಂಬೆ ಘಾಟಿಯ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ
ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ.

ಲಾರಿಯೂ ಪ್ರಪಾತಕ್ಕೆ ಮುಗಿಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಮೃತಪಟ್ಟವರನ್ನು ಕಾರ್ಕಳ ತಾಲೂಕಿನ ಮಿಯ್ಯಾರಿನವರು ಎಂದು ವರದಿಯಾಗಿದೆ.