ಕನ್ನಡ ಚಿತ್ರರಂಗದ ಮೇರು ನಟ ಡಾ| ರಾಜ್ ಕುಮಾರ್ ಪುತ್ರ ಪವರ್ ಸ್ಠಾರ್ ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅ 29 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರಿನ ವಿಕ್ರಮ್ ಆಸ್ಫತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸುತ್ತಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆಸ್ಪತ್ರೆ ಆವರಣದಲ್ಲಿ ಅಭಿಮಾನಿಗಳ ಆಕ್ರಂದನ
ಶಿವರಾಜ್ಕುಮಾರ್ ಅವರ ಬಹುನಿರೀಕ್ಷಿತ ಸಿನಿಮಾ ‘ಭಜರಂಗಿ’ ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್ಗೆ ಹೋಗಲು ಪುನೀತ್ ಪ್ಲಾನ್ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಆಸ್ಪತ್ರೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಬಂದಿದ್ದಾರೆ. ಪುನೀತ್ ಅವರ ಮನೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಅಪ್ಪು ವರ್ಕ್ಔಟ್ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.