ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ವೀರೇಂದ್ರ ಹೆಗ್ಗಡೆ: ಪುನೀತ್ ಗೂ ಧರ್ಮಸ್ಥಳಕ್ಕೂ ಇರುವ ಸಂಬಂಧ ಬಿಚ್ಚಿಟ್ಟ ಧರ್ಮಾಧಿಕಾರಿ

InShot_20211029_172026128
Ad Widget

Ad Widget

Ad Widget

ಧರ್ಮಸ್ಥಳ: 2021ರ ಸೆಪ್ಟೆಂಬರ್ 30 ರಂದು ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪುನೀತ್ ರಾಜ್‌ಕುಮಾರ್ ಭಾಗವಹಿಸಿದ್ದರು ಎಂದು ಹೆಗಡೆ ತಿಳಿಸಿದರು .

Ad Widget

ಖ್ಯಾತ ಚಲನಚಿತ್ರನಟ ಪುನೀತ್‌ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ.

Ad Widget

Ad Widget

Ad Widget

ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದರು.

Ad Widget

ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ.

Ad Widget

Ad Widget

ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿಧಿವಶರಾದ ನಟ ಪುನೀತ್ ರಾಜ್ ಕುಮಾರ್ ಗೆ ಸಂತಾಪ ಸೂಚಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೇಸ್‍ ನಾಯಕ ರಾಹುಲ್ ಗಾಂಧಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹಿತ ಭಾರತೀಯ ಚಿತ್ರರಂಗದ ಸಾವಿರಾರು ನಟ ನಟಿಯರು ಸಂತಾಪ ಸೂಚಿಸಿದರು.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: