ಮೂಡಬಿದಿರೆ, ಅ.28: ಮೂಡಬಿದಿರೆಯ ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಆಸ್ಫತ್ರೆಗೆ ದಾಖಲಾದ ಘಟನೆ ನಡೆದಿದೆ. ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಗಾಯಗೊಂಡು ಆಸ್ಫತ್ರೆಗೆ ದಾಖಲಾದವರು.
ತೋಡಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ‘ಸಂಪ್ರದಾಯ’ ದಿನ ಕಾರ್ಯಕ್ರಮ ಆಯೊಜಿಸಲಾಗಿದೆ. ಈ ಬಗ್ಗೆ ವಿ ತೃತೀಯ ವರ್ಷದ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಮೇಲೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ ನಲ್ವತ್ತು ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ನಡೆದ ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂಡಬಿದಿರೆಯ ಯೆನೆಪೊಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.30ರಂದು ನಡೆಯಲಿರುವ ಕಾರ್ಯಕ್ರಮವೊಂದರ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಅಂತಿಮ ವರ್ಷದ ವಿದ್ಯಾರ್ಥಿಗಳ ಒಂದು ಗುಂಪು 3ನೇ ವರ್ಷದ ವಿದ್ಯಾರ್ಥಿಗಳ ಒಂದು ಗುಂಪಿನೊಂದಿಗೆ ಘರ್ಷಣೆ ಉಂಟಾಗಿದೆ. ಈ ಸಂದರ್ಭ ವಿದ್ಯಾರ್ಥಿಗಳ ಒಂದು ಗುಂಪಿನ ಮೇಲೆ ಹೆಲ್ಮೆಟ್, ಕಲ್ಲು ಮತ್ತು ಕೈಯಿಂದ ಹಲ್ಲೆ ನಡೆಸಲಾಗಿದೆ. ಇತ್ತಂಡಗಳು ದೂರು ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ಹರಿರಾಂ ಶಂಕರ್, ಉಪ ಆಯುಕ್ತರು ಕಾನೂನು ಸುವ್ಯವಸ್ಥಾ ವಿಭಾಗ