ದೆಹಲಿ : ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ ಗ್ರಾಹಕರಿಗೆ ಎದುರಾಗಿದೆ. ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.
ಪೆಟ್ರೋಲ್ & ಡಿಸೇಲ್ ಬೆಲೆಏರಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನಂತೂ ಕೇಳುವುದೇ ಬೇಡ ಪ್ರತಿನಿತ್ಯಇಂಧನದ ಬೆಲೆ ಏರುತ್ತಲೇ ಇದೆ.
ಈಗಾಗಲೇ ಬೆಲೆ ಏರಿಕೆ ಹೊಡೆತಕ್ಕೆ ಸಿಲುಕಿ ಸಾಮನ್ಯರು ನಲುಗಿಹೋಗಿದ್ದಾರೆ. ಇದೀಗ ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ ಗ್ರಾಹಕರಿಗೆ ಎದುರಾಗಿದೆ.
ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.
ಎಲ್‌ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ ನ.1ರಂದು 266 ರೂ.ಯಷ್ಟು ಹೆಚ್ಚಾಗಿದೆ. ದೀಪಾವಳಿ ಹಬ್ಬಕೂ ಮುನ್ನವೇ ಎಲ್‌ಪಿಜಿ ಗ್ರಾಹಕರ ಜೇಬು ಸುಟ್ಟಿದೆ. ಒಂದೇ ಬಾರಿ 266 ರೂ. ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ದೊಡ್ಡ ಶಾಕ್ ನೀಡಿದೆ.
ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಹೊಟೇಲ್ ಮತ್ತು ಬೇಕರಿ ತಿನಿಸುಗಳ ದರ ಏರಿಕೆಯಾಗಲಿದೆ.
ಈ ಹಿಂದೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಕೂಡ ಪೆಟ್ರೋಲಿಯಂ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಂದು 43 ರೂ. ಏರಿಕೆ ಮಾಡಲಾಗಿತ್ತು. ಬಳಿಕ ಅಕ್ಟೋಬರ್ 1 ರಂದು ಈ ಬೆಲ 75 ರೂ. ಏರಿಕೆ ಮಾಡಲಾಗಿತ್ತು.
ಕಳೆದ ತಿಂಗಳು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಇದೀಗ ಮತ್ತೆ ಕಮರ್ಷಿಯಲ್ ಗ್ಯಾಸ್ 266 ರೂ. ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಹಲವು ನಗರಗಳಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ 2000 ರೂಪಾಯಿ ಗಡಿ ದಾಟಿದ್ದು, ಪರದಾಡುವಂತಾಗಿದೆ.
ಇತ್ತ ಕಳೆದ 10 ದಿನಗಳಿಂದಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಪ್ರತಿದಿನ ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 35-35 ಪೈಸೆಗಳಷ್ಟು ಹೆಚ್ಚಿಸುತ್ತಿವೆ.
ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್ ಅನ್ನು 113.15 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 104.09 ರೂ. ಗೆ ಮಾರಾಟ ಮಾಡಲಾಗುತ್ತಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.69 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ 98.42 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 115.5 ರೂ ಮತ್ತು ಡೀಸೆಲ್ ಬೆಲೆ 106.62 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 110.15 ರೂ ಮತ್ತು ಡೀಸೆಲ್ 101.56 ರೂ. ಗೆ ಮಾರಾಟವಾಗುತ್ತಿದೆ.