ಮಂಗಳೂರು: ನ 1 : ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ವರ್ಷದ ಮಗುವನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಚಂದನ್ (38) ಬಂಧಿತ ಆರೋಪಿ.
ಸದ್ಯ ಮಗುವಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಎರಡು ವರ್ಷದ ಮಗುವನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಮಗುವನ್ನು ಫಿಶ್ ಟ್ಯಾಂಕ್ ಒಳಗೆ ಹಾಕಿದ್ದ. ಪೋಷಕರು ಮಗು ಎಲ್ಲಿ ಎಂದು ಹುಡುಕಾಡಿದಾಗ ಟ್ಯಾಂಕ್ ಒಳಗೆ ಇರುವುದು ಪತ್ತೆಯಾಗಿತ್ತು.
ಸದ್ಯ ಮಗುವಿನ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆರೋಪಿ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
