ನೀಟ್ ಪರೀಕ್ಷೆ 2021 ಫಲಿತಾಂಶ : ಪುತ್ತೂರು ವಿವೇಕಾನಂದದ ಸಿಂಚನಾಲಕ್ಷ್ಮಿ ಗೆ ದ್ವಿತೀಯ ರ‍್ಯಾಂಕ್

IMG-20211102-WA0027
Ad Widget

Ad Widget

Ad Widget

ಪುತ್ತೂರು, ನ‌ 2 : ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2021ರ NEET (ನೀಟ್) ooಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸುವುದರ ಮೂಲಕ ಜಿಲ್ಲೆಯಲ್ಲೇ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ.

Ad Widget

ಈಕೆ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 658 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 2856 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 1611 ನೇ ರ‍್ಯಾಂಕ್, ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ಎರಡನೇ ರ‍್ಯಾಂಕ್ ಗಳಿಸಿರುತ್ತಾರೆ. ಕೃಷಿ ಕುಟುಂಬದಿಂದ ಬಂದಿರುವ ಸಿಂಚನಾಲಕ್ಷ್ಮೀ ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗ ಸರಣಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎಲ್ಲವನ್ನೂ ಸವಾಲಾಗಿ ತೆಗೆದುಕೊಂಡು ಈಗ ನೀಟ್ ಪರೀಕ್ಷೆಯಲ್ಲೂ ತನ್ನ ಸಾಮಥ್ಯವನ್ನು ತೋರಿಸಿದ್ದಾರೆ.

Ad Widget

Ad Widget

Ad Widget

ಈ ಮೂಲಕ ದೇಶದ ಅಗ್ರಮಾನ್ಯ ಕಾಲೇಜಿನಲ್ಲಿ ವೈದಕೀಯ ಶಿಕ್ಷಣ ಪಡೆಯಲು ಅವಕಾಶ ಹೊಂದಿದ್ದಾರೆ. ಈಕೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 96.16 ಪರ್ಸಂಟೈಲ್ ಅಂಕ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530 ನೇ ರ‍್ಯಾಂಕ್ ಮತ್ತು ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ಬಿಎನ್‌ವೈಎಸ್‌ನಲ್ಲಿ 974ನೇ ರ‍್ಯಾಂಕ್ ಗಳಿಸಿದ್ದಳು. ತನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಪೂರೈಸಿರುವ ಸಿಂಚನಾಲಕ್ಷ್ಮಿ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ.

Ad Widget

ಹಾಗೆಯೇ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 430 ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಖುಷಿ ಎಂ. ಆರ್ (ಅಖಿಲ ಭಾರತ ಮಟ್ಟದಲ್ಲಿ 598973 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 66102 ನೇ ರ‍್ಯಾಂಕ್), ದೀಪಾ-411 ಅಂಕಗಳು(ಅಖಿಲ ಭಾರತ ಮಟ್ಟದಲ್ಲಿ 178456 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 78360 ನೇ ರ‍್ಯಾಂಕ್), 400 ಅಂಕಗಳನ್ನು ಗಳಿಸಿದ ಅಭಿರಾಮ್ ಯು(ಅಖಿಲ ಭಾರತ ಮಟ್ಟದಲ್ಲಿ 192984ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 26744 ನೇ ರ‍್ಯಾಂಕ್)ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: