ನೆಲ್ಯಾಡಿ : ನ 2 : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH – 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ನ . 2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ಕಳಕೊಂಡ ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದೆ.
ಮಂಗಳೂರು – ಬೆಂಗಳೂರು ರಾಷ್ಡ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಶಿರಾಡಿ ಎಂಬಲ್ಲಿ ಘಟನೆ ನಡೆದಿದ್ದು ಐವರು ಗಾಯಾಳುಗಳನ್ನು ಪುತ್ತೂರು ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
