Ad Widget

Big Breaking- ಕೇಂದ್ರ ಸರ್ಕಾರದ ಬೆನ್ನಲ್ಲೇ ಬೊಮ್ಮಾಯಿ ಸರ್ಕಾರದಿಂದಲೂ ಬಂಪರ್ ಘೋಷಣೆ – ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಭಾರಿ ಇಳಿಕೆ – ಜೂನ್ ದರಕ್ಕೆ ಇಳಿಯಲಿದೆ ತೈಲ ದರ

20211103_232018
Ad Widget

Ad Widget

Ad Widget

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಪೆಟ್ರೋಲ್ , ಡೀಸೆಲ್ ಬೆಲೆಯೆರಿಕೆಯಿಂದ ಕಂಗಾಲಾಗಿದ್ದ ಜನತೆಗೆ ದೀಪಾವಳಿ ಹಬ್ಬದ ಕೊಂಚ ರಿಲೀಫ್ ಸಿಕ್ಕಿದೆ. ಮೊದಲಿಗೆ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರಕ್ಕೆ ಬಂದರೆ ರಾತ್ರಿಯಾಗುತ್ತಲೇ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರಕಾರವೂ ಬೆಲೆ ಇಳಿಸುವುದಾಗಿ ಘೋಷಿಸಿದೆ.

Ad Widget

Ad Widget

Ad Widget

Ad Widget

ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್​, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಸರಣಿ ಟ್ವೀಟ್​ ಮಾಡಿರುವ ಬೊಮ್ಮಾಯಿ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮೇಲೆ 10 ರೂಪಾಯಿ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡುಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.

Ad Widget

Ad Widget

ರಾಜ್ಯ ಸರ್ಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

2021ರ ಮೇ ತಿಂಗಳ ಪ್ರಾರಂಭದಲ್ಲಿ 93 ರಲ್ಲಿದ್ದ ಪೆಟ್ರೋಲ್ ದರ ತಿಂಗಳ ಅಂತ್ಯಕ್ಕೆ 97 ಕ್ಕೆ ತಲುಪಿ ಜೂನ್ ಅಂತ್ಯಕ್ಕೆ 102 ರೂಪಾಯಿ ತಲುಪಿತ್ತು.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: