2021ರ ಟಿ20 ವಿಶ್ವಕಪ್ ನಂತರ, ನ್ಯೂಜಿಲೆಂಡ್ ತಂಡವು ಮೂರು ಪಂದ್ಯಗಳ ಟಿ20 ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸಕೈಗೊಳ್ಳಲಿದೆ. ನವೆಂಬರ್ 17ರಂದು ಮೊದಲ ಟಿ20 ಪಂದ್ಯದೊಂದಿಗೆ ಪ್ರವಾಸ ಆರಂಭವಾಗಲಿದೆ. ಈ ಸರಣಿಯಿಂದಲೇ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ದ್ರಾವಿಡ್ 2023ರ ವಿಶ್ವಕಪ್ ವರೆಗೆ ಕೋಚ್ ಆಗಿ ಇರಲಿದ್ದಾರ
ದ್ರಾವಿಡ್ ಅವರನ್ನು 2023ರಲ್ಲಿ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ವರೆಗೆ ಎರಡು ವರ್ಷಗಳ ಕಾಲ ಈ ಹುದ್ದೆಗೆ ನೇಮಿಸಲಾಗಿದೆ. ದ್ರಾವಿಡ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಮೊದಲ ಆಯ್ಕೆಯಾಗಿದ್ದು, ಅವರು ದುಬೈನಲ್ಲಿ ಅವರೊಂದಿಗೆ ಮಾತನಾಡಿ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಮನವೊಲಿಸಿದರು. ದ್ರಾವಿಡ್ ಅರ್ಜಿ ಸಲ್ಲಿಸಿದ ಬಳಿಕ ಬಿಸಿಸಿಐ ಬೇರೆ ಯಾವುದೇ ಅರ್ಜಿಯನ್ನು ಪರಿಶೀಲಿಸುವ ಅಗತ್ಯವಿರಲಿಲ್ಲ.
ಬಿಸಿಸಿಐ ಪತ್ರಿಕಾ ಪ್ರಕಟಣೆಯ ಪ್ರಕಾರ, ‘ಕ್ರಿಕೆಟ್ ಸಲಹಾ ಸಮಿತಿಯು ಬುಧವಾರ ಅವಿರೋಧವಾಗಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ಸಮಿತಿಯಲ್ಲಿ ಸುಲಕ್ಷಣ ನಾಯಕ್ ಮತ್ತು ಆರ್ ಪಿ ಸಿಂಗ್ ಇದ್ದಾರೆ.
ದ್ರಾವಿಡ್ 2023ರ ವಿಶ್ವಕಪ್ ವರೆಗೆ ಕೋಚ್ ಆಗಿ ಇರಲಿದ್ದಾರೆ. ದ್ರಾವಿಡ್ ಅವರನ್ನು 2023ರಲ್ಲಿ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ವರೆಗೆ ಎರಡು ವರ್ಷಗಳ ಕಾಲ ಈ ಹುದ್ದೆಗೆ ನೇಮಿಸಲಾಗಿದೆ. ದ್ರಾವಿಡ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಮೊದಲ ಆಯ್ಕೆಯಾಗಿದ್ದು, ಅವರು ದುಬೈನಲ್ಲಿ ಅವರೊಂದಿಗೆ ಮಾತನಾಡಿ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಮನವೊಲಿಸಿದರು. ದ್ರಾವಿಡ್ ಅರ್ಜಿ ಸಲ್ಲಿಸಿದ ಬಳಿಕ ಬಿಸಿಸಿಐ ಬೇರೆ ಯಾವುದೇ ಅರ್ಜಿಯನ್ನು ಪರಿಶೀಲಿಸುವ ಅಗತ್ಯವಿರಲಿಲ್ಲ.

ಮುಖ್ಯ ಕೋಚ್ ಆಗಿ ನೇಮಕವಾಗಿರುವುದು ಗೌರವ: ದ್ರಾವಿಡ್
ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಳಿಕ ಪ್ರತಿಕ್ರಿಯಿಸಿದ ದ್ರಾವಿಡ್, “ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ದೊಡ್ಡ ಗೌರವವಾಗಿದ್ದು, ಈ ಜವಾಬ್ದಾರಿಗೆ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.