ಮಂಗಳೂರು: ನ 4 : ತಂದೆ – ಮಗ ಸೇರಿಕೊಂಡು ತಮ್ಮದೇ ಅಪಾರ್ಟ್ ಮೆಂಟ್ ನ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಿನ್ನೆ ( ನ 3) ತಡರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ಮಂಗಳೂರು ಕಾರ್ ಸ್ಟ್ರೀಟ್ ಮಹಮ್ಮಾಯಾ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್‌ಮೆಂಟ್ ನಿವಾಸಿ ವಿನಾಯಕ ಕಾಮತ್ ಮೃತಪಟ್ಟವರು. ಅದೇ ಅಪಾರ್ಟ್‌ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು.
ಆರೋಪಿ ಕೃಷ್ಣಾನಂದ ಕಿಣಿಗೆ ವಿನಾಯಕ ಕಾಮತ್ ಮೇಲೆ ವೈಯುಕ್ತಿಕ ದ್ವೇಷವಿತ್ತು. 4-5 ದಿನಗಳ ಹಿಂದೆ ವೀರ ವೆಂಕಟೇಶ ಅಪಾರ್ಟ್‌ಮೆಂಟ್ ಗೇಟ್ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ದುರಸ್ತಿ ಮಾಡಿದ್ದರು.. ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ಆರೋಪಿ ಕೃಷ್ಣಾನಂದ ಕಿಣಿಯವರು ಹತ್ಯೆಯಾದ ವಿನಾಯಕ ಕಾಮತ್ ಅವರೊಂದಿಗೆ ದ್ವೇಷ ಹೊಂದಿದ್ದರು. ಇದೇ ಕಾರಣಕ್ಕೆ ಜಗಳ ತೆಗೆದು ಕೊಲೆಗೈದಿದ್ದಾರೆಂದು ಮೃತ ವಿನಾಯಕ ಕಾಮತ್ ಪತ್ನಿ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ ಏನಾಯಿತು ?
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ವಿನಾಯಕ ಕಾಮತ್ ಅಪಾರ್ಟ್‌ಮೆಂಟ್ ಕೆಳಗೆ ಹೋಗಿದ್ದಾರೆ. ಈ ಇದು ವಿಕೋಪಕ್ಕೆ ತಿರುಗಿ ಮೂವರೂ ಹೊಡೆದಾಡಿಕೊಂಡಿದ್ದಾರೆ. ಆಗ ಕೃಷ್ಣಾನಂದ ಕಿಣಿ ತಮ್ಮ ಕೈಯ್ಯಲ್ಲಿದ್ದ ಚೂರಿಯಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ. ಈ ಸಂದರ್ಭ ಅವಿನಾಶ್ ಕಿಣಿ ಕೂಡಾ ಕೊಲೆಗೆ ಸಹಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಣ ವಿನಾಯಕ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 1.40ರ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ದೌಢಾಯಿದಿರುವ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
