ಪೆಟ್ರೋಲ್ ಡೀಸಲ್ʼಗಳ ಮೇಲಿನ ತೆರಿಗೆಯನ್ನು 2014ರ ಮನಮೋಹನ್ ಸರಕಾರದ ಮಟ್ಟಕ್ಕೆ ಇಳಿಸಿ – ಮೋದಿ ಸರಕಾರಕ್ಕೆ ಕಾಂಗ್ರೇಸ್ ಮುಖಂಡನ ಸವಾಲು

digvijaya-sing̤
Ad Widget

Ad Widget

Ad Widget

 ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ  ಮನಮೋಹನ್‌ ಸಿಂಗ್‌ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.

Ad Widget

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು ಇಳಿಸಿದ್ದು, ಅದನ್ನಿಗ   2014ರ ಮಟ್ಟಕ್ಕೆ ಕಡಿತಗೊಳಿಸಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Ad Widget

Ad Widget

Ad Widget

ಇಂಧನ ದರ ಏರಿಕೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ಮೋದಿಯವರಿಗೆ ನಿಜವಾಗಿಯೂ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿದ್ದರೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

 2014ರ ಮಟ್ಟಕ್ಕೆ ಇಳಿಸಿದರೇ  ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನೂ ₹18ರಷ್ಟು ಕಡಿಮೆಯಾಗಲಿದೆ. ಬಹುಶಃ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರು ಆ ನಿರ್ಧಾರ ಕೈಗೊಳ್ಳಬಹುದು’ ಎಂದು ಕಟಕಿಯಾಡಿದ್ದಾರೆ

Ad Widget

Ad Widget

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ ₹5 ಮತ್ತು ₹10ರಷ್ಟು ಕಡಿತಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿತ್ತು. ಆ ಬಳಿಕ ಕರ್ನಾಟಕವೂ ಸೇರಿದಂತೆ ಹಲವು ಬಿಜೆಪಿ ಅಡಳಿತದ ರಾಜ್ಯಗಳೂ ತೆರಿಗೆ ಕಡಿತ ನಿರ್ಧಾರ ಪ್ರಕಟಿಸಿವೆ

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: