Ad Widget

ಐತಿಹಾಸಿಕ ಧಾರ್ಮಿಕ ಕ್ಷೇತ್ರ ಕೇದಾರನಾಥ ಆವರಣದಲ್ಲಿ ಶೂ ಧರಿಸಿದ ಪ್ರಧಾನಿ ಮೋದಿ – ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ : ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶದ್ರೋಹಿ ಅಂತ ಬಿಂಬಿಸ್ತಿದ್ದರು ಎಂದ ಕಾಂಗ್ರೇಸ್‍

20211106_180536
Ad Widget

Ad Widget

ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ  ಪ್ರತಿಮೆಯನ್ನು ಹಾಗೂ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ್ದರು.

Ad Widget

Ad Widget

Ad Widget

Ad Widget

ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Ad Widget

Ad Widget

Ad Widget

Ad Widget

ಮೋದಿ ಕೇದಾರನಾಥ ಭೇಟಿ ದೃಶ್ಯ:

ಎಲ್ಲಕ್ಕಿಂತ ಅಚ್ಚರಿ ಎಂದರೆ ಸೋಷಿಯಲ್ ಮೀಡಿಯಾ ಬಳಕೆದಾರರು ಮೋದಿ ಕೇದಾರನಾಥ ಭೇಟಿ ಸಂದರ್ಭದ ವಿಡಿಯೋಗಳಲ್ಲಿ ಮೋದಿ ಶೂ ಧರಿಸಿರುವುದನ್ನು ಪತ್ತೆ ಹಚ್ಚಿದ್ದು, ಮೋದಿ ನಡೆ ವಿವಾದಕ್ಕೆ ಕಾರಣವಾಗಿದೆ. 

Ad Widget

Ad Widget


ಒಂದು ವೇಳೆ ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶಾದ್ಯಂತ ಅವರನ್ನು ದೇಶದ್ರೋಹಿ ಎಂಬಂತೆ ಪ್ರತಿಬಿಂಬಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಟೀಕಿಸಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೋದಿ ದೇವಾಲಯ ಆವರಣದಲ್ಲಿ ಶೂ ಧರಿಸಿ ನಡೆಯುತ್ತಿರುವ ವಿಡಿಯೊ ಹಂಚಿಕೊಂಡು, ಮೋದಿ ದೇವಾಲಯದಲ್ಲಿ ಶೂ ಧರಿಸಿ ನಮಸ್ಕರಿಸುತ್ತಿದ್ದಾರೆ ಎಂದರೆ ಅದೂ ಸಂಪ್ರದಾಯವಾಗಿರಬಹುದು ಎಂದು ಟ್ವೀಟ್ ಮಾಡಿದ್ದಾರೆ. 

जय बाबा केदारनाथ 🙏

अब ‘मोदी जी’ ने परिक्रमा के दौरान रेड कार्पेट पर अगर ‘जूते पहने है’ तो शायद ये परम्परा ही रही होगी? https://t.co/YpYw8xv6Eh

ಸನ್ ಗ್ಲಾಸ್ ಧರಿಸಿ ಮೋದಿ  ಪ್ರಾರ್ಥನೆ  ಮಾಡುವ ಪೋಟೋವೂ  ವೈರಲ್ ಆಗಿದ್ದು ಪರ ವಿರೋಧ ಚರ್ಚೆ ಪ್ರಾರಂಭವಾಗಿದೆ.

इस ‘महंगे चश्मे’ में बेरोजगार नजर आते है? https://t.co/SDGy1qC7fi

ಇನ್ನೊಂದು ಚಿತ್ರದಲ್ಲಿ ಕೇದಾರನಾಥ ದೇವಸ್ಥಾನದ ಒಳಗೆ ಚಪ್ಪಲಿ ಕಳಚುವ ಪೋಟೋ ಒಂದು ವೈರಲ್ ಆಗಿದ್ದು ಅದರಲ್ಲಿ ಭದ್ರತಾ ಸಿಬ್ಬಂದಿಯೂ ಮುಖ್ಯಧ್ವಾರದೊಳಗೆ ಶೂ ಧರಿಸಿದ್ದಾರೆಂದು ಕೆಲವರು ಟ್ವೀಟ್ ಮಾಡಿದ್ದಾರೆ. 

ಇದೇ ವೇಳೆ ನರೇಂದ್ರ ಮೋದಿ ಧರಿಸಿರುವುದು ಶೂ ಅಲ್ಲ, ಬಟ್ಟೆಯ ಕವಚ. ಅಲ್ಲಿನ ಚಳಿಯಲ್ಲಿ ಭಕ್ತಾದಿಗಳು ವುಲನ್ ಸಾಕ್ಸ್ ಧರಿಸುವುದು ಸಾಮಾನ್ಯ ಎಂದು ಮೋದಿ ಅಭಿಮಾನಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈಗಷ್ಟೆ ಚಳಿಗಾಲದ ಕಾರಣದಿಂದ ಕೇದಾರನಾಥ ಪ್ರವೇಶ ನಿರ್ಬಂಧಿಸಲು ದೇವಾಲಯದ ವೆಬ್ ಸೈಟಲ್ಲಿ ಬುಕಿಂಗ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ.  

Ad Widget

Leave a Reply

Recent Posts

error: Content is protected !!
%d bloggers like this: