ಪುತ್ತೂರು : ನ 8 : ಆರು ವರ್ಷದ ಬಾಲಕಿಗೆ ಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.
ಪ್ರಕರಣವೂ 6 ವರ್ಷದ ಹಿಂದೆ 2015ರಲ್ಲಿ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿತ್ತು. ಜಾಲ್ಸೂರು ನಿವಾಸಿ ಸತೀಶ್ ಜೈಲು ಶಿಕ್ಷೆಗೆ ಒಳಗಾದವ. ಈತನಿಗೆ 10 ವರ್ಷಗಳ ಕಾರಗೃಹ ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಜೈಲು ಶಿಕ್ಷೆ ವಿಧಿಸಿ ಪುತ್ತೂರು 5ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯವೂ ತೀರ್ಪು ಘೋಷಿಸಿದೆ.
2015 ರ ಡಿ. 2೦ರಂದು ಸತೀಶನೂ ಮಧ್ಯಾಹ್ನ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್ ಮತ್ತು ಐಸ್‌ಕ್ರೀಮ್ ಕೊಡುವ ಆಮಿಷವೊಡ್ಡಿ ಮನೆಯೊಳಗೆ ಕರೆದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು ಬಾಲಕಿಯ ತಾಯಿ ದೂರು ನೀಡಿದ್ದು ಸುಳ್ಯ ಠಾಣೆಯಲ್ಲಿ ಆರೋಪಿಯ ವಿರುದ್ದ ಐಪಿಸಿ ಕಲಂ 376 ಮತ್ತು ಪೋಕ್ಸೋ ಕಾಯ್ದೆ ಕಲಂ 4, 6, 8, 1೦ ರಡಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್‌ಪಿರೇರಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು.
ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೈದ್ಯೆ ಡಾ. ಶುಲ್ ಸುವರಿಸ್ ವಿಡಿಯೋ ಕಾನ್ನರೆನ್ಸ್ ಮೂಲಕ ಹಾಗೂ ಪ್ರಕರಣದ ತನಿಖಾಧಿಕಾರಿಗಳಾದ ಚಂದ್ರಶೇಖರ ಹೆಚ್.ವಿ. ಮತ್ತು ಆಗಿನ ವೃತ್ತ ನಿರೀಕ್ಷಕರಾಗಿದ್ದ ಬಿ.ಎಸ್, ಸತೀಶ್ ರವರು ನ್ಯಾಯಾಲಯಕ್ಕೆ ಹಾಜರಾಗಿ ವಿವರವಾದ ಸಾಕ್ಷಿ ನುಡಿದಿದ್ದರು.
ಆರೋಪಿಯೂ ಬಾಲಕಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿರುವುದು ದೃಢಪಟ್ಟಿರುವುದಾಗಿ ನ್ಯಾಯಾದೀಶರು ತೀರ್ಪು ಪ್ರಕಟಿಸಿದರು.

ಶಿಕ್ಷೆಯ ಪ್ರಮಾಣ:
ಭಾ.ದಂ.ಸಂ ಕಲಂ 376 ಹಾಗೂ 511 ರಡಿ ಮತ್ತು ಪೋಕ್ಸೋ ಕಾಯ್ದೆ ಕಲಂ 4,6,8 ರಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 25,000 ದಂಡವನ್ನು ವಿಧಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ ರೂ. 20 ಸಾವಿರವನ್ನು ಸಂತೃಸ್ತ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದೆ. ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ದಂ.ಪ.ಸಂ. ಕಲಂ 357(A) ರಡಿ ರೂ. ಒಂದು ಲಕ್ಷ ರೂಪಾಯಿಯನ್ನು ಸಂತೃಸ್ತೆಗೆ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.
ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.