ನವದೆಹಲಿ: ನ 9: ಅಡಿಕೆ ಸೇವನೆಯಿಂದ ಮಾರಕ ಕ್ಯಾನ್ಸರ್‌ನಂಥ ರೋಗಗಳು ಉಂಟಾಗುತ್ತಿದೆ. ಹೀಗಾಗಿ ಜನರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹಾಗಾಗಿಯೂ ಧಾರ್ಮಿಕ ವಿಧಿ ವಿಧಾನಗಳಲ್ಲಿ ಅದನ್ನು ಬಳಸಲು ಸರಕಾರ ಅನುಮತಿ ಮುಂದುವರೆಸಬೇಕು ಎಂದು ಅವರು ಹೇಳಿದ್ದಾರೆ
‘ಜಾರ್ಖಂಡ್‌ನ ಸಂಸದನಾಗಿ ನನ್ನ ವೈಯಕ್ತಿಕ ಅನುಭವದಲ್ಲಿ ಹೇಳುತ್ತಿ ದೇನೆ. ಪಾನ್ ಮಸಾಲದ ಪ್ರಮುಖ ಭಾಗವಾದ ಅಡಕೆ ಸೇವಿಸುವ ಮೂಲಕ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗಳಿಗೆ ಜನರು ತುತ್ತಾಗಿ ತೊಂದರೆ ಅನುಭವಿಸುವುದನ್ನು ಸ್ವತಃ ನಾನೇ ನೋಡಿದ್ದೇನೆ. ಹೀಗಾಗಿ ಮನುಷ್ಯರು ಅಡಿಕೆ ಬಳಸದಂತೆ ನಿಷೇಧ ಹೇರಬೇಕೆಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.
ಅಡಕೆ ಸೇವನೆಯಿಂದ ಆಸ್ತಮಾ ರೋಗ ಉಲ್ಬಣವಾಗುತ್ತದೆ.ಹೃದಯದ ರಕ್ತನಾಳ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಲ್ಲದೆ, ಉಸಿರಾಟ ಸಮಸ್ಯೆ, ಉಸಿರಾಟದ ಏರಿಳಿತದಂಥ ಸಮಸ್ಯೆಗಳು ಉಂಟಾಗುತ್ತವೆ ಎಂದು ಕೂಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ಕಾರಣಗಳಿಗಾಗಿಯೇ 2018ರಲ್ಲಿ ಮಹಾರಾಷ್ಟ್ರ ಸರ್ಕಾರ ಅಡಕೆ ಮಾರಾಟ ಮತ್ತು ಬಳಕೆಯ ನಿಷೇಧಿಸಿತ್ತು. ಹೀಗಾಗಿ ಮನುಷ್ಯರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು. ಆದರೆ ಎಂದು ದುಬೆ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.