ಇಂದಿನಿಂದ ರಾಜ್ಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ – ಆರೆಂಜ್ ಅಲರ್ಟ್ ಘೋಷಣೆ

FB_IMG_1636599819346
Ad Widget

Ad Widget

Ad Widget

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಕೂಡ ನೀಡಿದೆ.

Ad Widget

ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಅಧಿಕವಾಗಿರಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಸಾಧಾರಣವಾಗಿರಲಿದೆ ಎಂದು ಇಲಾಖೆ ಹೇಳಿದೆ.

Ad Widget

Ad Widget

ನವೆಂಬರ್‌ 11ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

Ad Widget

ನವೆಂಬರ್‌ 12ರಂದು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಯಾವುದೇ ಎಚ್ಚರಿಕೆಯ ಮುನ್ಸೂಚನೆ ಇರುವುದಿಲ್ಲ.

Ad Widget

Ad Widget

ನವೆಂಬರ್‌ 11 ಮತ್ತು 12ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ಮುನ್ನೆಚ್ಚರಿಕೆ ಇರುವುದಿಲ್ಲ.

Leave a Reply

Recent Posts

error: Content is protected !!
%d bloggers like this: