ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭ ಧರಿಸಲು ಕಾರಣವಾದ ಆರೋಪದಡಿ ಸಂತ್ತಸ್ತೆಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ನ 11 ರಂದು ಬಂಧಿಸಿದ್ದಾರೆ.
ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ಬಂಧಿತ ಆರೋಪಿ. 2020 ರ ಎಪ್ರಿಲ್ ತಿಂಗಳಿನಿಂದ ಸತತವಾಗಿ ಒಂದೂವರೆ ವರ್ಷ ಸಂತ್ರಸ್ತೆಯನ್ನು ಆರೋಪಿಯೂ ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ
ಸಂತ್ರಸ್ತೆ ಸಂಬಂಧಿಯೂ ಆಗಿರುವ ಆರೋಪಿ ರಮೇಶ್ ಕಳೆದ ಒಂದೂವರೆ ವರ್ಷದಿಂದ ಅಗಾಗ ಬಾಲಕಿಯ ಮನೆಗೆ ಬಂದು ಆಕೆಗೆ ಅತ್ಯಾಚಾರ ನಡೆಸುತಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗೂ ತಿಳಿಸಬಾರದಾಗಿ ಆರೋಪಿಯೂ ಬೆದರಿಕೆ ಹಾಕಿದ್ದ.

ಇತ್ತಿಚೆಗೆ ಬಾಲಕಿ ಅಸ್ವಸ್ಥಗೊಂಡಿದ್ದು ತಪಾಸಣೆಗಾಗಿ ತನ್ನ ಅಜ್ಜಿಯೊಂದಿಗೆ ಕಡಬ ಸಮುದಾಯ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಗರ್ಭಿಣಿಯಾಗಿರುವ ವಿಚಾರ ವೈದ್ಯರಿಂದ ತಿಳಿದ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಪರೀಕ್ಷಿಸಿದಾಗ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿದೆ.
ಬಳಿಕ ಪಾಜೋವು ನಿವಾಸಿ ರಮೇಶ್ ವಿರುದ್ಧ ಬಾಲಕಿ ದೂರು ನೀಡಿದ್ದು, ಕಡಬ ಪೋಲಿಸರು ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.