ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕೆರೆಯೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಪ್ರಕರಣ ದಾಖಲಾದ ಆರೋಪಿಗಳು. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು, ವಿಟ್ಲದ ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಉದ್ಯೋಗಿಯಾಗಿದ್ದ ನಿಶ್ಮಿತಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಅ.10 ರಂದು ನಿಶ್ಮಿತಾ ನಾಪತ್ತೆಯಾಗಿದ್ದು, ಅ.೧೧ರಂದು ದೇವಸ್ಥಾನದ ಪಕ್ಕದ ಕೆರೆಯಲ್ಲಿ ಈಕೆಯ ಮೃತ ದೇಹ ಪತ್ತೆಯಾಗಿತ್ತು. ಘಟನಾ ಸ್ಥಳದಲ್ಲಿ ಸಿಕ್ಕ ಯುವತಿಯ ಡೆತ್ ನೋಟನ್ನು ಆಧರಿಸಿ ಯುವತಿಯ ತಾಯಿಯೂ ನಾಲ್ವರ ವಿರುದ್ದ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಬಗ್ಗೆ ವಿಟ್ಲ ಠಾಣೆಗೆ ದೂರು ನೀಡಿದ್ದರು.ಆ ದೂರಿನ ಅಧಾರದಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ರಕ್ಷಿತ್ ಉದ್ದೇಶಪೂರ್ವಕವಾಗಿ ಯುವತಿಯಲ್ಲಿ ಮಾತನಾಡಿದ್ದು ಅದ್ದನ್ನು ಪ್ರಶಾಂತ್ ಸಹೋದರ ದಿನೇಶ್ ಹಾಗೂ ಯಶವಂತ ಅವರು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಆಕೆಯನ್ನು ಪ್ರೀತಿಸುತಿದ್ದ ಪ್ರಶಾಂತ್ ಎಂಬಾತನಿಗೆ ಕಳುಹಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.