Ad Widget

ಚಿಕ್ಕಮಗಳೂರಿನ ದತ್ತಪೀಠಕ್ಕೆ ತೆರಳುತ್ತಿದ್ದ ದತ್ತ ಮಾಲಾಧಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ – ಮೂವರಿಗೆ ಗಾಯ

stone-Pelt
Ad Widget

Ad Widget

Ad Widget

ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ ಮೇಲೆ ನ .13 ರಂದು ತಡ ರಾತ್ರಿ ಕಲ್ಲು ತೂರಾಟ ನಡೆದಿದೆ.

Ad Widget

Ad Widget

Ad Widget

Ad Widget

ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಫುಗೂಡಿದ್ದರು. ಇದೇ ಮಾರ್ಗವಾಗಿ ದತ್ತಮಾಲಾಧಾರಿಗಳು ಘೋಷಣೆ ಕೂಗುತ್ತ ಬಸ್ ಲ್ಲಿ ತೆರಳುವಾಗ ಅಲ್ಲಿದ್ದ ಗುಂಪು ಅಡ್ಡಗಟ್ಟಿ ಬಸ್ ಮೇಲೆ ಕಲ್ಲು ತೂರಿದೆ ಎನ್ನಲಾಗಿದೆ.

ಸಾಂಧರ್ಬಿಕ ಚಿತ್ರ

ಘಟನೆಯಲ್ಲಿ ಬಸ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದತ್ತಮಾಲಾಧಾರಿಗಳು ಮತ್ತು ಶ್ರೀರಾಮಸೇನೆ ಕಾರ್ಯಕರ್ತರು ಕೋಲಾರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Ad Widget

Ad Widget

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: