ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು.
ಮೃತರು ಪತ್ನಿ ಭಾರತಿದೇವಿ, ಪುತ್ರ ಹರ್ಷಿತ್ ಅವರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನ ಬಲ್ನಾಡು ಕರ್ಕುಂಜ ನಿವಾಸಿಯಾಗಿದ್ದ
ರಾಮಕೃಷ್ಣ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

ನ.25 ರಂದು ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನಲೆಯಲ್ಲಿ ತಡ ರಾತ್ರಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಆಗಲೇ ಅವರು ಮೃತಪಟ್ಟಿದ್ದರು.