ಹೈದರಾಬಾದ್: ಟಾಲಿವುಡ್ ನಟಿ ಶಾಲು ಚೌರಾಸಿಯಾ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಅವರ ಮೊಬೈಲ್ ಫೋನ್ ಕಸಿದುಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ನಟಿ ಉದ್ಯಾನವನದಲ್ಲಿ ವಾಕಿಂಗ್ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ, ಫೋನ್ ಕಿತ್ತುಕೊಳ್ಳುವ ಯತ್ನದಲ್ಲಿ ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮುಖಕ್ಕೆ ಹೊಡೆದು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.
ಕೃತ್ಯ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 392 (ದರೋಡೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ