ಮಂಗಳವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ನಡೆದಿದ್ದೂ , ಈ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನ.17 (ಇಂದು) ಬೆಳಿಗ್ಗೆ ಮೃತ ಪಟ್ಟ ಘಟನೆ ನಡೆದಿದೆ.
ಮಂಗಳೂರು ನಿವಾಸಿ ಗಣೇಶ್ (36) ಮೃತಪಟ್ಟ ಬೈಕ್ ಸವಾರ. ಮೃತರು ಮೆಲ್ಕಾರ್ ಸಮೀಪದ ಮಾರ್ನಬೈಲ್ ಸರ್ವಿಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು.
ಈ ರಸ್ತೆ ಅಪಘಾತವೂ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್ ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದಿವೆ.
ಬಿ.ಸಿ.ರೋಡ್ ಕಡೆಯಿಂದ ಬಂದ ಬೈಕ್ ಸವಾರ ಸಜಿಪ ಹೋಗುವ ರಸ್ತೆಗೆ (ಬಲಕ್ಕೆ) ತಿರುಗಿದ್ದು, ಈ ವೇಳೆ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ಒಡೆದು ಹೋಗಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.