ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ.. ಎದೆಯಗಲ ಎಷ್ಟೇ ಇಂಚಿನದ್ದರಾಗಲಿ..ಜನಶಕ್ತಿಯ ಎದುರು ಮಣಿಯಲೇಬೇಕು ಇದೇ ಪ್ರಜಾಪ್ರಭುತ್ವದ ಸೊಗಸು – ಇದು ರೈತರ ಸ್ವಾತಂತ್ರ್ಯೋತ್ಸವ ಎಂದು ಮೋದಿಯನ್ನು ವ್ಯಂಗ್ಯವಾಡಿದ ಸಿದ್ದರಾಮಯ್ಯ

InShot_20211119_113156898
Ad Widget

Ad Widget

Ad Widget

ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

Ad Widget

ರೈತರ ಹೋರಾಟ, ಪ್ರತಿಭಟನೆ ಹಿನ್ನೆಲೆ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ. ಈ ಐತಿಹಾಸಿಕ ಬೆಳವಣಿಗೆ ಕುರಿತು ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು. ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು. ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Ad Widget

Ad Widget

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ.

Ad Widget

ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಫೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಮತ್ತೊಂದು ಹೋರಾಟದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.

Ad Widget

Ad Widget

Leave a Reply

Recent Posts

error: Content is protected !!
%d bloggers like this: