Ad Widget

ಮಂಗಳೂರು: ಕಣಜದ ಹುಳು ದಾಳಿಯಿಂದ 6 ಮಕ್ಕಳ ರಕ್ಷಿಸಿ ಗೃಹರಕ್ಷಕ ದಳ ಸಿಬ್ಬಂದಿ ಬಲಿ

Screenshot_20211119-190443_Facebook
Ad Widget

Ad Widget

Ad Widget

ಮೂಲ್ಕಿ, ನ 19: ಕಿನ್ನಿಗೋಳಿ ಸಮೀಪದ ಶ್ರೀ ರಾಮಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.
ಇವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.

Ad Widget

Ad Widget

Ad Widget

Ad Widget

ಸಂತೋಷ್ ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಗೊಳಗಾಗಿ ಕಿನ್ನಿಗೋಳಿ ಪರಿಸರದ ಶಾಲೆಯ ಕೆಲ ಮಕ್ಕಳು ಗಂಭೀರಾವಸ್ಥೆಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.

ಮಕ್ಕಳ ರಕ್ಷಣೆಯ ಸಂದರ್ಭ ಕಣಜದ ಹುಳು ಸಂತೋಷ್ ಅವರಿಗೂ ಕಡಿದಿದ್ದು, ಆದರೆ, ಅವರು ಯಾವುದೇ ಚಿಕಿತ್ಸೆ ಪಡೆಯದೆ ಮನೆ ಕಡೆ ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

ಆರು ಮಕ್ಕಳ ರಕ್ಷಣೆ ಮಾಡಿದ ಸಂತೋಷ್ ಅವರ ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಮೃತರು ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: