ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೊಬ್ಬ ಮೃತಪಟ್ಟ ಘಟನೆ ನ.21ರಂದು ನಡೆದಿದೆ.
ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ 26 ವರ್ಷದ ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಮೃತ ಪ್ರಜ್ವಲ್ ಅವರು ಮಂಗಳೂರಿನ NMPT ಉದ್ಯೋಗಿಯಾಗಿದ್ದು, ತನ್ನ ಕಂಪನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಪ್ರಜ್ವಲ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.