ಮೆಲ್ಕಾರ್ ಜಂಕ್ಷನ್- ಯುವಕರ ಗುಂಪು ಆಯುಧಗಳೊಂದಿಗೆ ಹೊಡೆದಾಟ : ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

Screenshot_20211121-130413_Facebook
Ad Widget

Ad Widget

Ad Widget

ಬಂಟ್ವಾಳ, ನ. 21: ತಾಲೂಕಿನ ಮೆಲ್ಕಾರ್ ಜಂಕ್ಷನ್ ನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಯುವಕರ ಎರಡು ಗುಂಪು ಹೆದ್ದಾರಿಯಲ್ಲೆ ಆಯುಧಗಳೊಂದಿಗೆ ಸಾರ್ವಜನಿಕವಾಗಿ ಬಡಿದಾಡಿಕೊಂಡಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Ad Widget

ರಾತ್ರಿ ಸುಮಾರು 10 ಗಂಟೆಯ ಬಳಿಕ ಮೆಲ್ಕಾರ್ ಜಂಕ್ಷನ್ ಬಳಿ ವಾಹನಗಳಲ್ಲಿ ಬಂದ ಯುವಕರ ಎರಡು ಗುಂಪುಗಳು ಸಾರ್ವಜನಿಕವಾಗಿ ಹೆದ್ದಾರಿ ಬದಿಯಲ್ಲೇ ಹೊಡೆದಾಡಿಕೊಂಡಿದ್ದು ಘಟನೆಯ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಮಧ್ಯರಾತ್ರಿಯೇ ವೈರಲ್ ಆಗಿದೆ.

Ad Widget

Ad Widget

Ad Widget

ಪಾಣೆಮಂಗಳೂರು ವೆಂಕಟರಮಣ ದೇವಸ್ಥಾನದ ಲಕ್ಷದೀಪ ಕಾರ್ಯಕ್ರಮದ ಬಂದೊಬಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆ ಕ್ರೈಂ ಎಸ್ಸೈ ಕಲೈಮಾರ್ ಅವರು ಹೆದ್ದಾರಿ ಬದಿಯಲ್ಲಿ ಯುವಕರ ತಂಡ ಹೊಡೆದಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದ ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ ಮೆಲ್ಕಾರ್ ಜಂಕ್ಷನ್ ತಲುಪಿದಾಗ ಸಾರ್ವಜನಿಕ ಸ್ಥಳದಲ್ಲಿ ಸುಮಾರು 9-10 ಮಂದಿ ಅಪರಿಚಿತ ವ್ಯಕ್ತಿಗಳು ಗುಂಪು ಸೇರಿಕೊಂಡು ಒಬ್ಬರಿಗೊಬ್ಬರು ಹೊಡೆದಾಟ ಹಾಗೂ ದೂಡಾಟ ಮತ್ತು ದೊಣ್ಣೆಗಳನ್ನು ಬೀಸಿಕೊಂಡು ಕಲಹ ನಡೆಸಿ ಉರುಳಾಟ ಮಾಡುತ್ತಿರುವುದು ಕಂಡು ಬಂದಿದೆ. ಪೊಲೀಸರ ವಾಹನವನ್ನು ದೂರದಲ್ಲೇ ನೋಡಿದ ತಂಡ ಸ್ಥಳದಿಂದ ಪರಾರಿಯಾಗಿದೆ.

Ad Widget

ಈ ಬಗ್ಗೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 134/2021 ರಂತೆ ಕಲಂ 160, 143, 147, 148, 149 ಐಪಿಸಿಯಂತೆ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: