ಮುಂದಿನ ತಿಂಗಳು ಬ್ರಹ್ಮಕಲಶೋತ್ಸವ ನಡೆಯಲಿರುವ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ- ಆಮಂತ್ರಣ ಪತ್ರ ಬಿಡುಗಡೆ

MATA1
Ad Widget

Ad Widget

Ad Widget

ಪುತ್ತೂರು: ಕೋಡಿಬಾಂಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ಮುಂದಿನ ತಿಂಗಳು ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದರ ಪೂರ್ವಭಾವಿಯಾಗಿ ನಡೆಯುವ ಚಪ್ಪರ ಮುಹೂರ್ತ  ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವೂ ನ.11ರಂದು ದೇಗುಲದಲ್ಲಿ ನಡೆಸಲಾಯಿತು.

Ad Widget

ದೇವಸ್ಥಾನದ ಅವರಣದಲ್ಲಿ ನಡೆದ ಚಪ್ಪರ ಮುಹೂರ್ತ  ಕಾರ್ಯಕ್ರಮದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್‌ ಧಾರ್ಮಿಕ ವಿಧಿ ವಿದಾನಗಳನ್ನು ನಡೆಸಿದರು. ಪ್ರಗತಿಪರ ಕೃಷಿಕ ಕೇಶವ ಭಂಡಾರಿ  ಕೈಪರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಗೋಪಾಲ ಶೆಟ್ಟಿ ಕಳೆಂಜರವರು ಚಪ್ಪರದ ಕಂಬವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭ ಚಪ್ಪರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಹಕರಿಸಿದರು.

Ad Widget

Ad Widget

Ad Widget

ಬಳಿಕ ಬ್ರಹ್ಮಕಲಶೋತ್ಸವದ ಮುದ್ರಿತ ಅಮಂತ್ರಣ ಪತ್ರಿಕೆಯನ್ನು ದೇಗುಲದ ಸತ್ಯ ಧರ್ಮ ನಡೆಯಲ್ಲಿಟ್ಟು ಪೂಜೆ ಸಲ್ಲಿಸಲಾಯಿತು .ಈ ವೇಳೆ .ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವೂ ಚಿನ್ಮಯಿ ಸಂಭಾಗಣದಲ್ಲಿ ನಡೆಸಲಾಯಿತು.

Ad Widget

  ಆಮಂತ್ರಣ ಪತ್ರಿಕೆಯನ್ನು ಧಾರ್ಮಿಕ ಮುಖಂಡ ಸೀತಾರಾಮ ರೈ ಬೆಳೆಯೂರುಗುತ್ತು, ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಚಂದ್ರಶೇಖರ ಸನಿಲ್ ಬಿಡುಗಡೆಗೊಳಿಸಿದರು.  ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಉದ್ಯಮಿ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತು, ಸಂಚಾಲಕ ಗಂಗಾಧರ ಶೆಟ್ಟಿ ಮಠಂತಬೆಟ್ಟು, ಕೋಶಾಧಿಕಾರಿ ನಿರಂಜನ ರೈ ಮಠಂತಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಕರುಣಾಕರ ಸಾಮಾನಿ ಸಂಪಿಗೆದು ಕಾರ್ಯಕ್ರಮ ನಿರೂಪಿಸಿ,  ಜಗನ್ನಾಥ ಶೆಟ್ಟಿ ನಡುಮನೆ ವಂದಿಸಿದರು.  

ಡಿಸೆಂಬರ್‌  21ರಿಂದ 27ರವರೆಗೆ ಒಂದು ವಾರ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ದೇಗುಲದ  ಬ್ರಹ್ಮಕಲಶೋತ್ಸವ ಕಾರ್ಯಕ್ರಮವೂ ವಿಜ್ರಂಭಣೆಯಿಂದ ನಡೆಯಲಿದೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: